More

    ಸಾವಿರ ವರ್ಷಗಳ ಹಿಂದಿನ ಬೆಳವಣಿಗೆಯನ್ನು ನೆನಪಿಸಿದೆ ಬಿಎಸ್​ವೈ ರಾಜೀನಾಮೆ: ಸತೀಶ್​ ಜಾರಕಿಹೊಳಿ

    ಬೆಳಗಾವಿ: ಮುಖ್ಯಮಂತ್ರಿ ಆಗಿದ್ದ ಬಿ.ಎಸ್​. ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಿಗೇ ಅದಕ್ಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ, ಸಾವಿರ ವರ್ಷಗಳ ಹಿಂದಿನ ಬೆಳವಣಿಗೆಯೊಂದನ್ನು ನೆನಪಿಸಿಕೊಂಡಿದ್ದಾರೆ. ಮಾತ್ರವಲ್ಲ ರಾಜೀನಾಮೆ ಹಿಂದೆ ಪಿತೂರಿ ಇದೆ ಎಂಬುದನ್ನೂ ಹೇಳಿಕೊಂಡಿದ್ದಾರೆ.

    ಯಡಿಯೂರಪ್ಪ ಅವರು ರಾಜೀನಾಮೆ ನೀಡಿರುವ ಕುರಿತಾಗಿ ಗೋಕಾಕ್​ನಲ್ಲಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಇದು ಬಿಜೆಪಿಯ ಆಂತರಿಕ ವಿಚಾರ. ಆದರೆ ಅಧಿಕಾರದಿಂದ ಕೆಳಗೆ ಇಳಿಸಿರುವ ರೀತಿ ಸರಿಯಲ್ಲ. ಅದಕ್ಕಾಗಿ ಪಕ್ಷದಿಂದ ಯಡಿಯೂರಪ್ಪ ಮೇಲೆ ಒತ್ತಡ ಹಾಕಲಾಗಿದೆ. ಒತ್ತಡ ತಂತ್ರದಿಂದ ರಾಜೀನಾಮೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಕೆಟ್ಟ ಬೆಳವಣಿಗೆ ಅನಿಸುತ್ತಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ನಾನು-ನಾನು ಎನ್ನುವವರು ಸಿಎಂ ಆಗಲ್ಲ: ಕಂದಾಯ ಸಚಿವ ಆರ್. ಅಶೋಕ್

    ಅತ್ಯಂತ ಪ್ರಭಾವಿ ನಾಯಕರಾಗಿರುವ ಯಡಿಯೂರಪ್ಪ ಅವರು ಇಂದು ಭಾವುಕರಾಗಿ ಭಾಷಣ ಮಾಡಿದ್ದಾರೆ. ಅವರನ್ನು ಗೌರವಯುತವಾಗಿ ಹೋಗಲು ಅವಕಾಶ ಮಾಡಿಕೊಡಬೇಕಿತ್ತು. ಒತ್ತಡದಿಂದ ಕೆಳಗೆ ಇಳಿಸಿದ್ದನ್ನು ಯಾರೂ ಸಹಿಸಲು ಸಾಧ್ಯವಿಲ್ಲ. ನನಗೆ ಇದು 12ನೇ ಶತಮಾನವನ್ನು ನೆನಪಿಸುತ್ತಿದೆ. ಮನುವಾದಿಗಳು ಬಸವಣ್ಣನನ್ನು ಅಧಿಕಾರದಿಂದ ಕೆಳಗೆ ಇಳಿಸಿದ್ದರು. ಬಸವಣ್ಣ ಸಹ ಮಂತ್ರಿಯಾಗಿ ಇದ್ದರು. ಸಾವಿರ ವರ್ಷಗಳ ಹಿಂದೆ ನಡೆದಿದ್ದಂಥದ್ದೇ ಇಂದು ಯಡಿಯೂರಪ್ಪ ವಿಚಾರದಲ್ಲಿ ಮರುಕಳಿಸಿದೆ. ಬಸವಣ್ಣ ವಿರುದ್ಧ ನಡೆದಿದ್ದ ಪಿತೂರಿ ಯಡಿಯೂರಪ್ಪ ವಿರುದ್ಧವೂ ನಡೆದಿದೆ ಎಂದ ಜಾರಕಿಹೊಳಿ, ಮನುವಾದಿಗಳ ವಿರುದ್ಧ ಯಡಿಯೂರಪ್ಪ ಹೋರಾಟ ಮಾಡಬೇಕು ಎಂದಿದ್ದಾರೆ.

    ಇದನ್ನೂ ಓದಿ: ನಾನು ರಾಜಕಾರಣದಲ್ಲಿ ಖುಷಿ ಕಂಡವ ಅಲ್ಲ; ರಾಜಕೀಯಕ್ಕೆ ಬರುವ ಇಚ್ಛೆ ಇರಲಿಲ್ಲ…

    ಇನ್ನು ರಾಜೀನಾಮೆಯಿಂದ ಕಾಂಗ್ರೆಸ್​ ಮೇಲಾಗುವ ಪರಿಣಾಮಗಳ ಕುರಿತು ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಪಕ್ಷಕ್ಕೆ ಲಾಭ-ನಷ್ಟ ಈಗಲೇ ಹೇಳುವುದಕ್ಕೆ ಆಗುವುದಿಲ್ಲ. ಆದರೆ ಯಡಿಯೂರಪ್ಪ ಅವರನ್ನು ಇಷ್ಟು ಅವಮಾನಗೊಳಿಸಬಾರದಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

    ಇದು ಕಿಕ್ಕಿಳಿಸೋ ವಿಷಯ: ರಾಷ್ಟ್ರೀಯ-ರಾಜ್ಯ ಹೆದ್ದಾರಿ ಬಳಿ ಮದ್ಯದಂಗಡಿಗೆ ಪರವಾನಗಿ ಕೊಡಬೇಡಿ ಎಂದ ಸುಪ್ರೀಂ ಕೋರ್ಟ್​

    ‘ತಂದೆಗೆ ಒಳ್ಳೆಯ ಮಗಳಾಗಲಿಲ್ಲ, ಗಂಡನಿಗೆ ತಕ್ಕ ಹೆಂಡತಿಯಾಗಲಿಲ್ಲ..’: ಮೋಹನಕುಮಾರಿ ಇನ್ನಿಲ್ಲ…

    ಸಿಎಂ ಬಿಎಸ್​ವೈ ಕಡೆಯಿಂದ ಕೊಡಲಾದ ಲಕೋಟೆ​ಯಲ್ಲೇನಿತ್ತು?; ಸ್ವಾಮೀಜಿಯೊಬ್ಬರಿಂದ ಸ್ಪಷ್ಟನೆ ಹೊರಬಿತ್ತು..

    ಹಲೋ ಹಲೋ ಕೌರವೇಶ, ಇದೇನಿದು ಹೊಸ ವೇಷ!; ಕೃಷಿ ಸಚಿವ ಬಿ.ಸಿ. ಪಾಟೀಲರಿಗೆ ಏನಿದು ‘ಯೋಗ’?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts