

ಮೆಲ್ಬೋರ್ನ್: ಪ್ರಸ್ತುತ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ನಿತೀಶ್ ರೆಡ್ಡಿ (Nitish Reddy) ಶತಕದ ಬಲದಿಂದ ಮೊದಲ ಇನ್ನಿಂಗ್ಸ್ನಲ್ಲಿ 369 ರನ್ಗಳಿಗೆ ಆಲೌಟ್ ಆಗಿದ್ದು, 105ರನ್ಗಳ ಹಿನ್ನಡೆಯನ್ನು ಅನುಭವಿಸಿದೆ. 240 ರನ್ಗಳ ಮುನ್ನಡೆ ಸಾಧಿಸಿರುವ ಆಸ್ಟ್ರೇಲಿಯಾ ತಂಡಕ್ಕೆ ದಿಟ್ಟ ತಿರುಗೇಟು ನೀಡಿರುವ ಭಾರತ ತಂಡವು ಚಹಾ ವಿರಾಮದ ವೇಳೆಗೆ 6 ವಿಕೆಟ್ಗಳನ್ನು ಉರುಳಿಸುವ ಮೂಲಕ ಆತಿಥೇಯರಿಗೆ ದಿಟ್ಟ ತಿರುಗೇಟು ನೀಡಿದ್ದಾರೆ.
ಭಾರತದ ಪರ ಜಸ್ಪ್ರೀತ್ ಬುಮ್ರಾ (Jasprit Bumrah) 4 ವಿಕೆಟ್ಗಳನ್ನು ಪಡೆದಿದ್ದು, ಈ ಮೂಲಕ 200 ವಿಕೆಟ್ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ದಾಖಲೆಯೊಂದನ್ನು ಜಸ್ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ.
ಮೊದಲ ಇನ್ನಿಂಗ್ಸ್ನಲ್ಲಿ ನಾಲ್ಕು ವಿಕೆಟ್ ಪಡೆದಿದ್ದ ಬುಮ್ರಾ (Jasprit Bumrah), ಎರಡನೇ ಇನ್ನಿಂಗ್ಸ್ನಲ್ಲೂ ತಮ್ಮ ಮಾರಕ ದಾಳಿಯ ಮೂಲಕ ನಾಲ್ಕು ವಿಕೆಟ್ಗಳನ್ನು ಪಡೆದಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಇತಿಹಾಸದಲ್ಲೇ ಅತ್ಯುತ್ತಮ ಆ್ಯವರೇಜ್ನಲ್ಲಿ 200 ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದಾರೆ. ಇದಲ್ಲದೆ ಅತಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಗಳಿಸಿದ ವಿಶ್ವದ ನಾಲ್ಕನೇ ಬೌಲರ್ ಎಂಬ ಗೌರವಕ್ಕೆ ಬುಮ್ರಾ ಭಾಜನರಾಗಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ 200 ವಿಕೆಟ್ ಕಬಳಿಸಿದ ಭಾರತದ 12ನೇ ಬೌಲರ್ ಆಗಿದ್ದಾರೆ. ಇದಲ್ಲದೆ 19.56 ಸರಾಸರಿಯನ್ನು ಹೊಂದಿರುವ ಬುಮ್ರಾ ವೆಸ್ಟ್ ಇಂಡೀಸ್ನ ಜೋಯಲ್ ಗಾರ್ನರ್ 20.34 ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 200 ವಿಕೆಟ್ ಪಡೆದ ಸಾಧನೆ ಮಾಡಿದ ವಿಶ್ವದ 82ನೇ ಬೌಲರ್ ಎಂಬ ಹೆಗ್ಗಳಿಕೆಗೂ ಜಸ್ಪ್ರೀತ್ ಬುಮ್ರಾ ಪಾತ್ರರಾಗಿದ್ದಾರೆ.