ಐಸಿಸಿ ವರ್ಷದ ಕ್ರಿಕೆಟಿಗನಾಗಿ Jasprit Bumrah ಆಯ್ಕೆ; 7 ವರ್ಷದ ಬಳಿಕ ಭಾರತೀಯನ ಮುಡಿಗೇರಿದ ಪ್ರಶಸ್ತಿ

jasprit bumrah
Published on

ದುಬೈ: ಟೀಮ್​ ಇಂಡಿಯಾದ ಸ್ಟಾರ್ ಆಟಗಾರ ಜಸ್ಪ್ರೀತ್​ ಬುಮ್ರಾರನ್ನು (Jasprit Bumrah) ಐಸಿಸಿ ವರ್ವದ ಕ್ರಿಕೆಟಿಗೆ ಎಂದು ಘೋಷಿಸಿದೆ. 2024ರಲ್ಲಿ ಬುಮ್ರಾರ ಅತ್ಯುತ್ತಮ ಪ್ರದರ್ಶನಕ್ಕಾಗಿ ಅವರಿಗೆ ಪ್ರತಿಷ್ಠಿತ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿಯನ್ನುನೀಡಿ ಐಸಿಸಿ ಸತ್ಕರಿಸುತ್ತಿದೆ. 

ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿ ರೇಸಿನಲ್ಲಿ ಜಸ್ಪ್ರೀತ್​ ಬುಮ್ರಾ (Jasprit Bumrah) ಮಾತ್ರವಲ್ಲದೇ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್, ಇಂಗ್ಲೆಂಡ್‌ನ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಇದ್ದರು. ಈ ಮೂವರನ್ನು ಹಿಂದಿಕ್ಕಿ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವಲ್ಲಿ ವೇಗಿ ಜಸ್ಪ್ರೀತ್​ ಬುಮ್ರಾ ಯಶಸ್ವಿಯಾಗಿದ್ಧಾರೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಐಸಿಸಿ, ಜಸ್ಪ್ರೀತ್​ ಬುಮ್ರಾ (Jasprit Bumrah) ಅವರಿಗೆ ಪ್ರತಿಷ್ಠಿತ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. 2024ರಲ್ಲಿ ಅವರ ಅಸಾಮಾನ್ಯ ಆಟವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಐಸಿಸಿ ತ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಐದನೇ ಭಾರತೀಯ? 

ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿ ಪಡೆದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೆ ಜಸ್ಪ್ರೀತ್​ ಬುಮ್ರಾ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ರಾಹುಲ್ ದ್ರಾವಿಡ್ (2004), ಸಚಿನ್ ತೆಂಡೂಲ್ಕರ್ (2010), ರವಿಚಂದ್ರನ್ ಅಶ್ವಿನ್ (2016) ಮತ್ತು ವಿರಾಟ್ ಕೊಹ್ಲಿ (2017, 2018) ಈ ಪ್ರಶಸ್ತಿಗೆ ಭಾಜನರಾಗಿದ್ದರು. 7 ವರ್ಷಗಳ ನಂತರ ಭಾರತೀಯರೊಬ್ಬರು ಈ ಪ್ರಶಸ್ತಿಯನ್ನು ಪಡೆಯುತ್ತಿರುವುದು ಮತ್ತಷ್ಟು ವಿಶೇಷವಾಗಿದೆ.

2024ರಲ್ಲಿ ಇಂಗ್ಲೆಂಡ್​ ವಿರುದ್ಧ ನಡೆದ ಸರಣಿ, ಟಿ20 ವಿಶ್ವಕಪ್​ ಸೇರಿದಂತೆ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಬುಮ್ರಾರನ್ನು ನಿನ್ನೆ (ಜನವರಿ 27) ಐಸಿಸಿ ವರ್ಷದ ಟೆಸ್ಟ್​ ಕ್ರಿಕೆಟಿಗನಾಗಿ ಆಯ್ಕೆ ಮಾಡಲಾಗಿತ್ತು. ಈ ಮೂಲಕ ಒಂದೇ ವರ್ಷದಲ್ಲಿ ಎರಡೆರಡು ಐಸಿಸಿ ಪ್ರಶಸ್ತಿ ಗೆಲ್ಲುವ ಮುನ್ನ ಬುಮ್ರಾ ಹೊಸ ದಾಖಲೆಯನ್ನು ಬರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net