More

    ಲಾಲ್‌ಬಾಗ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕಾಲ್ನಡಿಗೆ ಜಾಥಾ

    ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಮತ ಚಲಾಯಿಸುವ ಮೂಲಕ ಪ್ರಜುಪ್ರಭುತ್ವವನ್ನು ಗೆಲ್ಲಿಸಬೇಕಿದೆ ಎಂದು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

    ನಗರದ ಲಾಲ್‌ಬಾಗ್ ಮುಖ್ಯದ್ವಾರದಿಂದ ಸಸ್ಯಕಾಶಿಯ ಒಳಗೆ ಮತದಾನ ಜಾಗೃತಿ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದ ಅವರು, ವಿದ್ಯಾರ್ಥಿಗಳೆಲ್ಲರೂ ಯುವ ಮತದಾರರಾಗಿದ್ದು, ಮೊದಲ ಬಾರಿ ಮತ ಚಲಾಯಿಸುತ್ತಿದ್ದೀರಿ. ಪ್ರಜಾಪ್ರಭುತ್ವಕ್ಕೆ ಉತ್ತಮ ಕೊಡುಗೆ ನೀಡಲು ಯುವ ಸಮೂಹ ತಪ್ಪದೆ ಮತ ಚಲಾಯಿಸಬೇಕು ಎಂದರು.

    ಬೆಂಗಳೂರು ನಗರದಲ್ಲಿ ಕಳೆದ ಚುನಾವಣೆಯಲ್ಲಿ ಶೇ. 54 ಪ್ರಮಾಣದಷ್ಟು ಮತದಾನವಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಮತದಾನದ ಶೇಕಡವಾರು ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

    17 ಕಾಲೇಜುಗಳ ವಿದ್ಯಾರ್ಥಿಗಳು ಭಾಗಿ:

    ಮತದಾನದ ಅರಿವು ಜಾಥಾದಲ್ಲಿ ಮಹಾರಾಣಿ ಕಾಲೇಜು, ವಿವೇಕಾನಂದ ಪದವಿ ಕಾಲೇಜು, ವಿಜಯ ಕಾಲೇಜು, ಸರ್ಕಾರಿ ಕಲಾ ಕಾಲೇಜು, ಎಸ್‌ಎಲ್ಎನ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸೇರಿ 17 ಕಾಲೇಜುಗಳಿಂದ 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಲಾಲ್‌ಬಾಗ್‌ನಲ್ಲಿರುವ ವಾಯುವಿಹಾರ ಮಾರ್ಗದಲ್ಲಿ ಸುಮಾರು 4 ಕಿ.ಮೀ. ಕಾಲ್ನಡಿಯ ಜಾಥಾ ಮೂಲಕ ಸಾಗಿ ವಾಯುವಿಹಾರಿಗಳಲ್ಲಿ ಏ.26ರಂದು ತಪ್ಪದೆ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ವಿದ್ಯಾರ್ಥಿಗಳು ‘ಪ್ರಜಾಪ್ರಭುತ್ವಕ್ಕೆ ಮತದಾನ ನೀಡಿ’, ‘ನನ್ನ ಮತ ದೇಶಕ್ಕೆ ಹಿತ’, ‘ಚುನಾವಣಾ ಪರ್ವ ದೇಶದ ಗರ್ವ’ ಸೇರಿ ಇನ್ನಿತರ ಘೋಷಣೆಗಳನ್ನು ಕೂಗುತ್ತಾ ಜಾಥಾ ಸಾಗಿತು.

    ಕಾಲ್ನಡಿಗೆ ಜಾಥಾದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪಿ.ಎಸ್.ಕಾಂತರಾಜು, ನೋಡಲ್ ಅಧಿಕಾರಿ ಪ್ರತಿಭಾ ಸೇರಿ ಇನ್ನಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts