ಹಿಂದಿ ಭಾಷೆ ಹೇರಿಕೆ ವಿವಾದ

ನವದೆಹಲಿ: ನೂತನ ಶಿಕ್ಷಣ ನೀತಿಯಲ್ಲಿ ಹಿಂದಿ ಹೇರಿಕೆ ಪ್ರಸ್ತಾಪವಿಲ್ಲ. ಈ ಕುರಿತು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಸ್ಪಷ್ಟಪಡಿಸಿದ್ದಾರೆ.

ಕೆಲ ಮಾಧ್ಯಮಗಳಲ್ಲಿನ ಸುದ್ದಿ ಹಾಗೂ ದಕ್ಷಿಣ ಭಾರತದ ರಾಜಕೀಯ ಮುಖಂಡರ ಹೇಳಿಕೆ ಬಳಿಕ ಟ್ವಿಟರ್​ನಲ್ಲಿ ಸ್ಪಷ್ಟನೆ ನೀಡಿರುವ ಜಾವಡೇಕರ್, ಶಿಕ್ಷಣ ನೀತಿ ಕುರಿತ ಸಮಿತಿ ಯಾವುದೇ ಭಾಷೆಯನ್ನು ಕಡ್ಡಾಯ ಮಾಡುವ ಬಗ್ಗೆ ಶಿಫಾರಸು ಮಾಡಿಲ್ಲ. ಕೆಲ ಮಾಧ್ಯಮಗಳು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಟ್ವೀಟ್ ಮಾಡಿದ್ದಾರೆ.

ಏನು ವಿವಾದ?: ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿವರೆಗೆ ಹಿಂದಿಯನ್ನು ಒಂದು ಭಾಷೆಯನ್ನಾಗಿ ಕಲಿಯುವುದು ಕಡ್ಡಾಯ ಎಂದು ನೂತನ ಶಿಕ್ಷಣ ನೀತಿಯಲ್ಲಿ ಹೇಳಲಾಗಿದೆ. ಇದರಿಂದ ದೇಶದ ಎಲ್ಲ ಶಿಕ್ಷಣ ಸಂಸ್ಥೆಗಳು ಹಿಂದಿಯನ್ನು ಕಲಿಸಲೇಬೇಕಾಗುತ್ತದೆ. ಸದ್ಯಕ್ಕೆ ದಕ್ಷಿಣ ಭಾರತದಲ್ಲಿ ಹಿಂದಿಯನ್ನು ತೃತೀಯ ಭಾಷೆಯನ್ನಾಗಿ ಕಲಿಯಲಾಗುತ್ತಿತ್ತು. ಅದು ಆಯ್ಕೆಯ ವಿಷಯವಾಗಿತ್ತು ಎಂದು ಕೆಲ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದವು.

Leave a Reply

Your email address will not be published. Required fields are marked *