

ಮುಂಬೈ: ನಟಿ ಕಂಗನಾ ರಣಾವತ್ ವಿರುದ್ಧ ಬಾಲಿವುಡ್ನ ಹಿರಿಯ ಸಾಹಿತಿ ಜಾವೇದ್ ಅಖ್ತರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸುಖಾಸುಮ್ಮನೆ ಕಂಗನಾ ನನ್ನ ಹೆಸರನ್ನು ಬಳಸಿದ್ದರು. ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಮಾನಹಾನಿ ಮಾಡಿದ್ದರು ಎಂದು ಆರೋಪಿಸಿ ದೂರು ನೀಡಿದ್ದಾರೆ.
ಕಳೆದ ಆರು ತಿಂಗಳಿಂದ ಬಾಲಿವುಡ್ನಲ್ಲಿ ಕಂಗನಾ ತಮ್ಮ ತರಹೇವಾರಿ ಹೇಳಿಕೆಗಳ ಮೂಲಕವೇ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದರು.ಬಾಲಿವುಡ್ನ ಬಹುತೇಕ ಎಲ್ಲ ಕಲಾವಿದರಿಗೆ ಮಾತಿನ ಮೂಲಕವೇ ಚಾಟಿ ಬೀಸಿದ್ದರು.
ಈಗಾಗಲೇ ಮಹಾರಾಷ್ಟ್ರ ಸರ್ಕಾರ ಮತ್ತು ಒಂದಷ್ಟು ಬಾಲಿವುಡ್ನ ಸ್ಟಾರ್ ನಟರಿಂದಲೂ ಕೆಂಗೆಣ್ಣಿಗೆ ಗುರಿಯಾಗಿರುವ ಕಂಗನಾ ವಿರುದ್ಧ ಹಲವರು ದೂರು ನೀಡಿದ್ದಾರೆ. ಇತ್ತೀಚೆಗಷ್ಟೇ ತುಮಕೂರಿನಲ್ಲಿಯೂ ಕಂಗನಾ ವಿರುದ್ಧ ವಕೀಲರೊಬ್ಬರು ದೂರು ನೀಡಿದ್ದರು. (ಏಜೆನ್ಸೀಸ್)