More

    ಜೆಎನ್​ಯು ವಿವಿ ಆವರಣದಲ್ಲಿ ನಡೆದ ಹಿಂಸಾಚಾರ ಪ್ರಕರಣ ಸಂಬಂಧ ಎಫ್​ಐಆರ್​ ದಾಖಲು

    ನವದೆಹಲಿ: ಜವಾಹರಲಾಲ್​ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್​ಯು) ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

    ಗಲಭೆ ಮತ್ತು ಆಸ್ತಿ ಹಾನಿ ವಿಭಾಗದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನೈಋತ್ಯ ದೆಹಲಿಯ ಡಿಸಿಪಿ ದೇವೇಂದ್ರ ಆರ್ಯ ಹೇಳಿದ್ದಾರೆ.

    ಜೆಎನ್​ಯು ಆವರಣದಲ್ಲಿ ನಡೆದ ಗಲಭೆ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ಸಿಸಿಟಿವಿಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

    ಜೆಎನ್‌ಯು ಆವರಣದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಹಲವು ದೂರುಗಳು ಬಂದಿವೆ ಎಲ್ಲವನ್ನು ಆಧರಿಸಿ ತನಿಖೆ ನಡೆಸಲಾಗುವುದು. ಭಾನುವಾರ ಸಂಜೆ ಜೆಎನ್​ಯುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ನಿಯೋಗದೊಂದಿಗೆ ಪೊಲೀಸರು ಸಭೆ ನಡೆಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

    ಜೆಎನ್‌ಯು, ಜಾಮಿಯಾ ಮತ್ತು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಒಳಗೊಂಡ ನಿಯೋಗ ಗಾಯಗೊಂಡ ವಿದ್ಯಾರ್ಥಿಗಳಿಗೆ ತುರ್ತು ವೈದ್ಯಕೀಯ ನೆರವು ನೀಡಬೇಕು ಹಾಗೂ ಹಿಂಸಾಚಾರಕ್ಕೆ ಕಾರಣರಾದ ಆರೋಪಿಗಳನ್ನು ಬಂಧಿಸಬೇಕು ಎಂದು ಪೊಲೀಸರಿಗೆ ದೂರು ನೀಡಿದೆ.
    ಭಾನುವಾರದ ಮಡೆದ ಹಿಂಸಾಚಾರದಲ್ಲಿ ಗಾಯಗೊಂಡ 23 ವಿದ್ಯಾರ್ಥಿಗಳನ್ನು ಸೋಮವಾರ ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

    ಕ್ಯಾಂಪಸ್‌ನಲ್ಲಿ ಹಿಂಸಾಚಾರದ ಕುರಿತು ಜೆಎನ್‌ಯು ಶಿಕ್ಷಕರ ಸಂಘ ಸಭೆ ನಡೆಸುತ್ತಿದ್ದಾಗ ಮುಸುಕುಧಾರಿಗಳು ಆವರಣ ಪ್ರವೇಶಿಸಿ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ದಾಳಿ ನಡೆಸಿದ್ದರು.
    ಗಲಭೆ ನಂತರ ಜೆಎನ್​ಯುಗೆ ಅಧಿಕ ಪೊಲೀಸರ ಭದ್ರತೆ ಒದಗಿಸಲಾಗಿದೆ. ಅಧಿಕೃತ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ಕ್ಯಾಂಪಸ್​ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts