More

    ಜೆಎನ್​ಯು ಹಾಸ್ಟೆಲ್​ ಶುಲ್ಕ ಹೆಚ್ಚಳ ಪ್ರಶ್ನಿಸಿ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದ ವಿದ್ಯಾರ್ಥಿಗಳು

    ನವದೆಹಲಿ: ಜವಾಹರಲಾಲ್​ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯದ ಶುಲ್ಕ ಹೆಚ್ಚಳ ಪ್ರಶ್ನಿಸಿ ಜೆಎನ್​ಯು ವಿದ್ಯಾರ್ಥಿ ಸಂಘ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದೆ.

    ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಆಯಿಷೆ ಘೋಷ್ ಹಾಗೂ ಇತರ ಪದಾಧಿಕಾರಿಗಳು ಕೋರ್ಟ್​ಗೆ ಅರ್ಜಿ ಸಲ್ಲಿಸಿ, ಹಳೆಯ ಶುಲ್ಕ ರಚನೆಯ ಪ್ರಕಾರ ವಿದ್ಯಾರ್ಥಿಗಳ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ವಿವಿಗೆ ಕೋರ್ಟ್​ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

    ಅಕ್ಟೋಬರ್ 2019 ರ ಸಭೆಯಲ್ಲಿ ವಿಶ್ವವಿದ್ಯಾನಿಲಯದ ಇಂಟರ್ ಹಾಸ್ಟೆಲ್ ಅಡ್ಮಿನಿಸ್ಟ್ರೇಷನ್ (ಐಎಚ್‌ಎ) ತೆಗೆದುಕೊಂಡ ನಿರ್ಧಾರಗಳು ಅನಿಯಂತ್ರಿತ ಮತ್ತು ಕಾನೂನುಬಾಹಿರ ಹಾಗೂ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts