More

    ‘ಜವಾನ್’ ಅಧಿಕೃತ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಗೊತ್ತಾ? ಚಿತ್ರತಂಡದಿಂದಲೇ ಮಾಹಿತಿ

    ಜವಾನ್ ಸಿನಿಮಾದ ಕಲೆಕ್ಷನ್ ಕುರಿತಾಗಿ ಸಾಕಷ್ಟು ಕುತೂಹಲವಿತ್ತು. ಒಂದೊಂದು ದಿನ ಒಂದೊಂದು ಕಲೆಕ್ಷನ್ ವರದಿಯಾಗುತ್ತಿದೆ. ಸಹಜವಾಗಿಯೇ ಅಭಿಮಾನಿಗಳಲ್ಲಿ ಇದು ಗೊಂದಲಕ್ಕೆ ಕಾರಣವಾಗಿತ್ತು. ಇದೀಗ ಅಧಿಕೃತವಾಗಿಯೇ ನಿರ್ಮಾಣ ಸಂಸ್ಥೆಯೇ ಕಲೆಕ್ಷನ್ ವಿವರವನ್ನು ಹಂಚಿಕೊಂಡಿದ್ದು, 15 ದಿನಕ್ಕೆ ವಿಶ್ವದಾದ್ಯಂತ ಬರೋಬ್ಬರಿ 937.61 ಕೋಟಿ ರೂಪಾಯಿ ಬಾಚಿಕೊಂಡಿದೆ. ವೀಕೆಂಡ್​​ ಆದ ಕಾರಣ ಶೀಘ್ರದಲ್ಲೇ ಸಾವಿರ ಕೋಟಿ ರೂಪಾಯಿಗೆ ತಲುಪಲಿದೆ.


    ‘ಜವಾನ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಜವಾನ್ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳು ಕೂಡ ಕೇಳಿ ಬರುತ್ತಿವೆ. ಸಮಾರಂಭವೊಂದರಲ್ಲಿ ಸಿನಿಮಾದ ಕುರಿತು ಮಾತನಾಡಿರುವ ನಿರ್ದೇಶಕ ಅಟ್ಲಿ ತಮ್ಮ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಬರಬೇಕು. ಆ ಪ್ರಶಸ್ತಿ ಪಡೆಯಲು ಚಿತ್ರಕ್ಕೆ ಎಲ್ಲ ಅರ್ಹತೆ ಇದೆ ಎಂದಿದ್ದರು.


    ನಿರ್ದೇಶಕ ಅಟ್ಲಿ (Atlee) ತಮ್ಮ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದ್ದಾರೆ. ‘ಜವಾನ್’ ಯಶಸ್ಸಿನ ಬೆನ್ನಲ್ಲೇ ಅವರು ‘ಜವಾನ್ 2’ ಸಿನಿಮಾ ಮಾಡಲು ಮುಂದಾಗಿದ್ದು, ಇದರ ಜೊತೆಗೆ ಶಾರುಖ್ ಖಾನ್ ಅಭಿಮಾನಿಗಳಿಗೆ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ.


    ಭಾರತದಲ್ಲೇ 400 ಕೋಟಿಗೂ ಅಧಿಕ ಹಣ ಬಾಚಿದೆ. ವಿಶ್ವದಾದ್ಯಂತ 800 ಕೋಟಿಗೂ ಅಧಿಕ ಹಣ ನಿರ್ಮಾಪಕರಿಗೆ ಹರಿದು ಬಂದಿದೆ. ಈ ಖುಷಿಯಲ್ಲೇ ಅಟ್ಲಿ ಜವಾನ್ 2 ಸಿನಿಮಾ ಘೋಷಣೆ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts