ಬಾಕ್ಸ್​ ಆಫೀಸ್​ನಲ್ಲಿ ಹೊಸ ದಾಖಲೆ ಬರೆದ 'ಜವಾನ್'​!

Untitled design - 2023-09-11T155617.029
Published on

ಮುಂಬೈ: ಬಾಲಿವುಡ್ ಕಿಂಗ್​ ಖಾನ್, ನಟ ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಜವಾನ್​ ಚಿತ್ರ ಕಳೆದ ವಾರ ಬಿಡುಗಡೆಗೊಂಡು ಇದೀಗ ಬಾಕ್ಸ್​ ಆಫೀಸ್​ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ.

ಶಾರೂಖ್​ ಖಾನ್​ ಮತ್ತು ನಟಿ ನಯನತಾರ ಮುಖ್ಯಭೂಮಿಕೆಯಲ್ಲಿ ನಟಿಸಿದ ಜವಾನ್​ ಚಿತ್ರ ಬಿಡುಗಡೆಗೊಂಡ ಮೊದಲ ದಿನದಿಂದಲೂ ಗಲ್ಲಾಪೆಟ್ಟಿಗೆಯಲ್ಲಿ ಭಾರೀ ಸದ್ದು ಮಾಡಿದ್ದು, ಇದೀಗ ಜಾಗತಿಕ ಬಾಕ್ಸ್​ ಆಫೀಸ್​ನಲ್ಲಿ ಅತೀ ವೇಗವಾಗಿ 500 ಕೋಟಿ ರೂ. ಗಳಿಕೆ ಕಂಡ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಜವಾನ್​ ಪಾತ್ರವಾಗಿದೆ.

ಅಟ್ಲೀ ಕುಮಾರ್​ ನಿರ್ದೇಶನದ ಈ ಚಿತ್ರ ದಿನದಿಂದ ದಿನಕ್ಕೆ ಹೊಸ ದಾಖಲೆಗಳನ್ನು ನಿರ್ಮಿಸುವಲ್ಲಿ ಸದ್ಯ ಮುಂಚೂಣಿಯಲ್ಲಿದೆ. ಚಿತ್ರಮಂದಿರಗಳಲ್ಲಿ ಶಾರೂಖ್​ ಅವರ ಅಭಿಮಾನಿಗಳ ಅಬ್ಬರ ಜೋರಾಗಿದ್ದು, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಅಧಿಕ ಸಂಖ್ಯೆಯಲ್ಲಿ ಥಿಯೇಟರ್​ಗಳತ್ತ ತೆರಳುತ್ತಿದ್ದಾರೆ. ಈ ವಾರವೂ ಚಿತ್ರ ಇದೇ ವೇಗವನ್ನು ಕಾಯ್ದುಕೊಂಡರೆ, ಪ್ರಾಯಶಃ ಇನ್ನೂ ಹೆಚ್ಚಿನ ದಾಖಲೆಗಳನ್ನು ಬರೆಯುವಲ್ಲಿ ಅನುಮಾನವೇ ಇಲ್ಲ.

ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ನಿರ್ಮಾಣದ ಜವಾನ್​ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ,(ಏಜೆನ್ಸೀಸ್). 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net