More

    ಕಳಪೆ ಬೀಜ ಪೂರೈಸಿದರೆ ಶಿಸ್ತು ಕ್ರಮ


    ಹುಕ್ಕೇರಿ: ರೈತರು ಭೂಮಿಯನ್ನು ಸರಿಯಾಗಿ ಹದಗೊಳಿಸಿದ ಬಳಿಕ ಬಿತ್ತನೆ ಕಾರ್ಯ ಆರಂಭಿಸಬೇಕು ಎಂದು
    ಶಾಸಕ ಉಮೇಶ ಕತ್ತಿ ಹೇಳಿದರು.

    ಪಟ್ಟಣದ ಕೃಷಿ ಇಲಾಖೆಯ ಆವರಣದಲ್ಲಿ ಸೋಮವಾರ ನಡೆದ ಮುಂಗಾರು ಹಂಗಾಮಿನ ಸೋಯಾಬೀನ್ ಬೀಜ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಕ್ಕೇರಿ ತಾಲೂಕಿನ ರೈತರ ಅನುಕೂಲಕ್ಕಾಗಿ ಈ ಬಾರಿ 9 ಸಾವಿರ ಕ್ವಿಂಟಾಲ್ ಬೀಜ ದಾಸ್ತಾನು ಮಾಡಲಾಗಿದೆ. ಬೇಡಿಕೆಗೆ ಅನುಗುಣವಾಗಿ ಬೀಜ ವಿತರಿಸಲಾಗುವುದು. ಕಳಪೆ ಬೀಜ ವಿತರಣೆ ಕಂಡು ಬಂದರೆ ಬೀಜ ಪೂರೈಕೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

    ಜಿಪಂ ಸದಸ್ಯೆ ಅನಸೂಯಾ ಪಾಟೀಲ, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಪರಗೌಡ ಪಾಟೀಲ, ಪುರಸಭೆ ಮಾಜಿ ಉಪಾಧ್ಯಕ್ಷ ಗುರುರಾಜ ಕುಲಕರ್ಣಿ, ರಾಜೇಶ ಮುನ್ನೋಳಿ, ನೀಲಕಂಠ ಕೆ., ಕೃಷಿ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಎಂ.ಎಸ್. ಪಟಗುಂದಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಶೇಖರ ಪಾಟೀಲ ಇತರರು ಇದ್ದರು.

    ಕೊಕಟನೂರ ವರದಿ: ಸರ್ಕಾರ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸುತ್ತಿದ್ದು, ರೈತರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತೆಲಸಂಗ ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ ಹೇಳಿದರು. ಸಮೀಪದ ಅಡಹಳ್ಳಿ ಗ್ರಾಮದಲ್ಲಿ ಸೋಮವಾರ ಬೀಜ ವಿತರಣೆ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸಿ ಬೀಜ ಪಡೆಯಬೇಕು ಎಂದರು. ಕೆ.ಡಿ. ಹುಣಸಿಕಟ್ಟಿ, ಪಿ.ಎನ್. ವಾಲಿ, ಶ್ರೀಶೈಲ ತಾಂವಶಿ, ಮಹಾದೇವ ಹಿಪ್ಪರಗಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts