ನವದೆಹಲಿ: ಹಾಲಿ ಚಾಂಪಿಯನ್ಸ್ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಶುರುವಾಗುವುದಕ್ಕೆ ಹಲವು ತಿಂಗಳುಗಳು ಬಾಕಿ ಉಳಿದಿದ್ದು, ಟೂರ್ನಿ ಆರಂಭವಾಗುವುದಕ್ಕೂ ಮುಂಚಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಏಕೆಂದರ ಈ ಬಾರಿಯ ಟೂರ್ನಿಯು ಹಾಲಿ ಚಾಂಪಿಯನ್ಸ್ ಪಾಕಿಸ್ತಾನದ ನೆಲದಲ್ಲಿ ನಡೆಯುತ್ತಿದ್ದು, ಭದ್ರತೆಯ ಕಾರಣದಿಂದಾಗಿ ಭಾರತ ಭಾಗಿಯಾಗುವುದಿಲ್ಲ ಎಂದು ಹೇಳಿದೆ. ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಸಿದರೆ ಮಾತ್ರ ಭಾಗಿಯಾಗುವುದಾಗಿ ಹೇಳಿರುವ ಬಿಸಿಸಿಐ ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಎಂದು ಕಡ್ಡಿ ಮುರಿದಂತೆ ಹೇಳಿದೆ. ಐಸಿಸಿ ಕೂಡ ಬಿಸಿಸಿಐ ಬೆನ್ನಿಗೆ ನಿಂತಿದ್ದು, ಪಾಕಿಸ್ತಾನದ ಮಾತ್ರ ಹೈಬ್ರಿಡ್ ಮಾದರಿಯಲ್ಲಿ ನಡೆಸಲು ತಯಾರಿಲ್ಲ ಎಂದು ತನ್ನ ನಿಲುವನ್ನು ತಿಳಿಸಿದೆ.
ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಭಾರತ ಸರ್ಕಾರ ಟೀಮ್ ಇಂಡಿಯಾವನ್ನು ಚಾಂಪಿಯನ್ಸ್ ಟ್ರೋಪಿ ಆಡಲು ಪಾಕಿಸ್ತಾನಕ್ಕೆ ಕಳುಹಿಸಿವುದು ಬಹತೇಕ ಡೌಟ್ ಎಂದು ಹೇಳಲಾಗಿದ್ದು, ಭಾರತ ತಂಡ ತೆರಳುವುದಿಲ್ಲ ಎಂಬ ಪಕ್ಕಾ ಆಗಿದೆ. ಇತ್ತ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಕರೆಸುವ ಜವಬ್ದಾರಿಯನ್ನು ಪಿಸಿಬಿ, ಐಸಿಸಿ ಹೆಗಲಿಗೆ ಹೊರಿಸಿದೆ. ಹೀಗಾಗಿ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪ್ರೇಮಿಗಳಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ಈವರೆಗೆ ಯಾವುದೇ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ. ಆದರೆ, ಈ ಕುರಿತು ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡುವ ಕುರಿತು ಸೇರಿದಂತೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಜಯ್ ಷಾ, ಈ ಬಗ್ಗೆ ನಾವಿನ್ನು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಟೂರ್ನಿ ಹತ್ತಿರ ಬಂದಾಗ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಹೇಳಿದ್ದಾರೆ.
ಇದನ್ನೂ ಓದಿ: ಭಾರತ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ್ರೆಷ್ಟು, ಬಿಟ್ಟರೆಷ್ಟು ನಮಗೆ…ಸೊಕ್ಕಿನ ಹೇಳಿಕೆ ಕೊಟ್ಟ ಪಾಕ್ ಮಾಜಿ ಆಟಗಾರ
ಆರ್ಥಿಕ ಸಂಕಷ್ಟದ ಭಯ
ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದ್ದು, ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾಗೆ ಇರುವ ಕ್ರೇಜ್ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್ ಮೇಲೆ ಇರುವ ಕಳಂಕವೂ ದೂರವಾಗಲಿದೆ ಎಂಬ ನಂಬಿಕೆಯಲ್ಲಿ ಅಲ್ಲಿನ ಕ್ರಿಕೆಟ್ ಮಂಡಳಿ ಕಾದು ಕುಳಿತಿದೆ. ಅಲ್ಲದೇ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಕ್ರಿಕೆಟ್ ಮೂಲಕ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ. ಆದರೆ, ಪಿಸಿಬಿ ನಿರೀಕ್ಷೆಗೆ ಬಿಸಿಸಿಐ ಆಘಾತ ನೀಡಿದ್ದು, ಬಹುತೇಕ ಟೀಮ್ ಇಂಡಿಯಾ ಪಾಕಿಸ್ತಾನ ತೆರಳುವುದು ಅನುಮಾನವಾಗಿದೆ.
ಇದಲ್ಲದೆ ಭದ್ರತೆಯ ಕಾರಣದಿಂದಾಗಿ ಭಾರತದ ಪಂದ್ಯಗಳನ್ನು ಲಾಹೋರ್ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಸುವುದಾಗಿ ತಿಳಿಸಿದ್ದು, ಇದಕ್ಕಾಗಿ ಕ್ರೀಡಾಂಗಣದ ಪಕ್ಕದಲ್ಲಿರುವ ಐದು ಎಕರೆ ಜಮೀನನ್ನು ಸ್ವಾದೀನಪಡಿಸಿಕೊಳ್ಳಲಾಗಿದ್ದು, ಭಾರತದ ಆಟಗಾರರು ಹಾಗೂ ಸಿಬ್ಬಂದಿ ಉಳಿದುಕೊಳ್ಳಲು 5 ಸ್ಟಾರ್ ಹೋಟೆಲ್ ನಿರ್ಮಿಸುತಿವುದಾಗಿ ಪಿಸಿಬಿ ತಿಳಿಸಿದೆ. ಇದಲ್ಲದೆ ಭಾರತ ತಂಡ ಪಾಕಿಸ್ತಾನಕ್ಕೆ ಬರುವುದರಿಂದ ಉಭಯ ದೇಶಗಳ ನಡುವಿನ ಸಂಬಂಧ ಸ್ವಲ್ಪಮಟ್ಟಿಗೆ ಸರಿಹೋಗಬಹುದು ಎಂದು ಪಿಸಿಬಿ ಆಶಿಸಿದೆ. ಆದರೆ, ಮುಂದಿನ ದಿನಗಳಲ್ಲಿ ಭಾರತ ಸರ್ಕಾರ ಇದಕ್ಕೆ ಹೇಗೆ ಪ್ರತಿಕ್ರಿಯಿಸಲಿದೆ ಎಂದು ಕಾದು ನೋಡಬೇಕಿದೆ.