ಕೋಮುವಾದ ನಿರ್ನಾಮಕ್ಕೆ ಜಯಶ್ರೀಕೃಷ್ಣ ಸಮಿತಿ ಸಂಘಟಿತ ಪ್ರಯತ್ನ :ತೋನ್ಸೆ ಜಯಕೃಷ್ಣ ಎ. ಶೆಟ್ಟಿ

JAYAKRISHNA PRESSMEET
Published on


ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುವಾದದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಹಲವು ಜೀವಗಳು
ಬಲಿಯಾಗಿವೆ. ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಮಾರಕವಾಗಿರುವ ಕೋಮುವಾದವನ್ನು ನಿರ್ನಾಮ ಮಾಡಲು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಘಟಿತ ಪ್ರಯತ್ನ ನಡೆಸಲಿದೆ ಎಂದು ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡದಲ್ಲಿ ಈಗ ದಕ್ಷ ಪೊಲೀಸ್ ಅಧಿಕಾರಿಗಳಿದ್ದಾರೆ. ಕೋಮು ಗಲಭೆಯಂತಹ ಘಟನೆಗಳು ಮರುಕಳಿಸಬಾರದು. ಈ ನಿಟ್ಟಿನಲ್ಲಿ ಮುಂಬೈಯಲ್ಲಿರುವ ಸಮಿತಿಯ ಸದಸ್ಯರು ಕರಾವಳಿಯಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದೇವೆ ಎಂದರು.
ಸಮಿತಿಯ ದ.ಕ.ಜಿಲ್ಲಾ ಕಾರ್ಯಾಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ ಮಾತನಾಡಿ ‘ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯನ್ನು
ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ವಿಸ್ತರಿಸಲಾಗುತ್ತಿದೆ. ಪ್ರತಿ ತಾಲೂಕಿನಿಂದ ಐದು ಮಂದಿ ಸದಸ್ಯರನ್ನು ಸುರಕ್ಷತೆ ಹಾಗೂ ಸೌಹಾರ್ದತೆಯ ಕಾರ್ಯ ನಿರ್ವಹಿಸಲು ನೇಮಿಸಲಾಗುವುದು ಎಂದರು.
ಸಮಿತಿಯ ರಾಜ್ಯ ಸಂಯೋಜಕ ಜಗದೀಶ್ ಅಧಿಕಾರಿ ಕೆ.ಪಿ. ಮಾತನಾಡಿ ಕರಾವಳಿಯಲ್ಲಿ ಮತೀಯ ವಿಚಾರಕ್ಕೆ ನಡೆಯುವ ಸಂಘರ್ಷವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಜನತೆಯ ಬೇಡಿಕೆಗೆ ಪೂರಕವಾಗಿ ಉತ್ತಮ ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ
ಸಮಿತಿಯ ಹೈದರ್ ಪರ್ತಿಪ್ಪಾಡಿ ಮಾತನಾಡಿ, ಜಿಲ್ಲೆಯ ಸೌಹಾರ್ದತೆಗೆ ಮುಂಬೈಯಲ್ಲಿ ನೆಲೆಸಿರುವ ಕರಾವಳಿಗರು ಕೈಜೋಡಿಸಿದ್ದಾರೆ. ಇದು ಸ್ವಾಗತಾರ್ಹ ಬೆಳವಣಿಗೆ ಎಂದರು. ವಿಲ್ಸನ್ ಅವರು ಮಾತನಾಡಿ, ಮಾನವೀಯತೆಯೇ ಶ್ರೇಷ್ಠ ಧರ್ಮ ಎಂಬುದು ಯುವಕರಿಗೆ ಮನದಟ್ಟಾಗುವ ನಿಟ್ಟಿನಲ್ಲಿ ಸಮಿತಿ ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.
ಸಮಿತಿಯ ಅಧ್ಯಕ್ಷ ನಿತ್ಯಾನಂದ ಕೋಟ್ಯಾನ್, ಜಿಲ್ಲಾ ಕಾಯದರ್ಶಿ ಸುರೇಂದ್ರ ಮೆಂಡನ್, ಜಿಲ್ಲಾ ಕಾರ್ಯದರ್ಶಿ ಜಿ.ಟಿ.
ಆಚಾರ್ಯ, ಉಪ ಕಾರ್ಯಾಧ್ಯಕ್ಷ ಅರುಣ್ ಪ್ರಕಾಶ್ ಶೆಟ್ಟಿ, ಮಾಜಿ ಅಧ್ಯಕ್ಷ ಧರ್ಮಪಾಲ ದೇವಾಡಿಗ, ವಕ್ತಾರ ದಯಾಸಾಗರ್ ಚೌಟ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net