More

    ಕೆಂಪೇಗೌಡರಿಂದ ಬೆಂಗಳೂರಿಗೆ ಅಂತಾರಾಷ್ಟ್ರೀಯ ಖ್ಯಾತಿ ; ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿಕೆ

    ತುಮಕೂರು : ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದರೆ ಅದರ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲಬೇಕು ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.

    ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ವಿವಿಧ ಸಂ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದರು. ಇಂದು ಅನೇಕ ಕ್ಷೇತ್ರಗಳಿಗೆ ಬೆಂಗಳೂರು ಬ್ರ್ಯಾಂಡ್ ಎನಿಸಿದೆ, ಹಲವು ಆಶಯದೊಂದಿಗೆ ನಿರ್ವಾಣವಾದ ಬೆಂಗಳೂರು ಇಂದು ಪರಿಸರ ವಾಲಿನ್ಯದಿಂದ ಹಾಳಾಗುತ್ತಿದೆ. ಅವರು ಕಟ್ಟಿಸಿದ ಕೆರೆ-ಕಟ್ಟೆಗಳು ಪ್ಲಾಸ್ಟಿಕ್ ತ್ಯಾಜ್ಯದ ತಾಣವಾಗಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಕೆಂಪೇಗೌಡರ ಕನಸಿನ ಬೆಂಗಳೂರಿನ ಪರಿಸರ ರಕ್ಷಿಸುವ ಮೂಲಕ ಅವರ ಕನಸು ನನಸು ವಾಡುವ ಕೆಲಸವನ್ನು ನಾವೆಲ್ಲರೂ ವಾಡಬೇಕಾಗಿದೆ ಎಂದರು.

    ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶಗೌಡ ಮಾತನಾಡಿ, ನಾಡಪ್ರಭು ಕೆಂಪೇಗೌಡ ಅವರ ದೂರದೃಷ್ಟಿಯಿಂದ ನಿರ್ವಾಣವಾದ ಬೆಂಗಳೂರು ಇಂದು ರಾಜ್ಯ ರಾಜಧಾನಿಯಾಗಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದಿದೆ. ಒಕ್ಕಲಿಗ ಸವಾಜದ ಪ್ರಮುಖರೆನಿಸಿದ ಕೆಂಗಲ್ ಹನುಮಂತಯ್ಯ, ಎಸ್.ಎಂ.ಕೃಷ್ಣ, ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಸಿಎಂ ಆಗಿ ಸೇವೆ ಸಲ್ಲಿಸಿದ್ದಾರೆ ಎಂದರು.

    ಮುಂದಿನ ದಿನಗಳಲ್ಲಿ ಒಕ್ಕಲಿಗ ನಾಯಕರು, ನಮ್ಮಲ್ಲಿರುವ ಗೊಂದಲಗಳನ್ನು ಬದಿಗೊತ್ತಿ, ಎಲ್ಲ ಸವಾಜಗಳ ಪ್ರೀತಿ, ವಿಶ್ವಾಸ ಗಳಿಸುವ ಮೂಲಕ ಸಮುದಾಯದ ಅಭಿವೃದ್ಧಿಗೆ ದುಡಿಯುವ ನಿಟ್ಟಿನಲ್ಲಿ ಮುಂದಾಗಬೇಕಿದೆ. ಕರೊನಾ ಹಿನ್ನೆಲೆಯಲ್ಲಿ ಇಂದು ಸಾಂಕೇತಿಕವಾಗಿ ಕೆಂಪೇಗೌಡ ಜಯಂತಿ ಆಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದರು.

    ಶಾಸಕ ಜಿ.ಬಿ.ಜೋತಿಗಣೇಶ್ ಮಾತನಾಡಿ, ಬಿಜೆಪಿ ಸರ್ಕಾರ ಕೆಂಪೇಗೌಡ ಜಯಂತಿ ೋಷಣೆ ಮಾಡಿದೆ, ಅಂತಾರಾಷ್ಟ್ರೀಯ ವಿವಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡುವ ಮೂಲಕ ಅವರ ನೆನಪು ಅಚ್ಚಳಿಯದೆ ಉಳಿಯುವಂತೆ ಮಾಡಿದೆ ಎಂದರು.

    ನಗರಪಾಲಿಕೆ ಮೇಯರ್ ಬಿ.ಜಿ.ಕೃಷ್ಣಪ್ಪ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ, ತಹಸೀಲ್ದಾರ್ ಮೋಹನ್‌ಕುವಾರ್, ಜಿಲ್ಲಾ ಸರ್ಕಾರಿ ನೌಕರರ ಸಂದ ಅಧ್ಯಕ್ಷ ನರಸಿಂಹರಾಜು, ಸಮುದಾಯದ ಮುಖಂಡರಾದ ನರಸೇಗೌಡ, ಮುರಳೀಧರ ಹಾಲಪ್ಪ, ಪಾಲಿಕೆ ಸದಸ್ಯ ಕುಮಾರ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts