ಮಹಾಪುರುಷರ ಸಂದೇಶ ಸಾರಲು ಜಯಂತಿ ಆಚರಣೆ ಪೂರಕ; ಬುದ್ಧ ಜಯಂತಿಯಲ್ಲಿ ಸಚಿವ ತಂಗಡಗಿ ಬಣ್ಣನೆ

blank

ಬೆಂಗಳೂರು: ಮಹಾಪುರುಷರ ತತ್ವ ಸಂದೇಶಗಳನ್ನು ಯುವ ಪೀಳಿಗೆಗೆ ಸಾರಲು ಜಯಂತಿ ಆಚರಣೆ ಅಗತ್ಯವಾಗಿದ್ದು, ಸರ್ಕಾರ ಜಯಂತಿ ಆಚರಿಸುವುದರಿಂದ ಇಡೀ ಸಮಾಜಕ್ಕೆ ಉತ್ತಮ ಸಂದೇಶ ತಲುಪುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆರವೀಂದ್ರ ಕಲಾಕ್ಷೇತ್ರದಲ್ಲಿ ಇಲಾಖೆ ಹಮ್ಮಿಕೊಂಡಿದ್ದ ಭಗವಾನ್ ಬುದ್ದರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

blank

ನಮ್ಮ ಸರ್ಕಾರ ಈ ವರೆಗೆ 32 ಮಹಾತ್ಮರ ಜಯಂತಿ ಆಚರಣೆ ಮಾಡುತ್ತಿದೆ. ಇದೇ ಮೊದಲ ಬಾರಿಗೆ ಜಗತ್ತಿಗೆ ಶಾಂತಿ ಸಂದೇಶವನ್ನು ಸಾರಿದ ಭಗವಾನ್ ಬುದ್ಧರ ಜಯಂತಿ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಜಗತ್ತಿನಲ್ಲಿ ರೋಷ, ದ್ವೇಷಗಳು ತಾಂಡವವಾಡುತ್ತಿರುವ ಇಂದಿನ ದಿನಮಾನಗಳಲ್ಲಿ ಬುದ್ಧನ ತತ್ವ ಮಾರ್ಗದರ್ಶಕವಾಗಿದೆ. ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ತತ್ವಗಳಲ್ಲಿ ನಂಬಿಕೆ ಇರಿಸಿಕೊಂಡಿದೆ.

ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಮಾಡಲಾಗುವುದು ಹಾಗೂ ಮಹಾಬೋಧಿ ಅಧ್ಯಯನ ಕೇಂದ್ರದ ನೂರು ವರ್ಷಗಳ ಹಳೆಯ ಗ್ರಂಥಾಲಯವನ್ನು ಡಿಜಿಟಲೀಕರಣ ಗೊಳಿಸಲು ಒಂದು ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು. ಪ್ರಸಕ್ತ ವರ್ಷದ ಆಯವ್ಯಯದಲ್ಲಿ ಜೈನ, ಭೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 100 ಕೋಟಿ ಅನುದಾನವನ್ನು ಸಿಎಂ ೋಷಿಸಿದ್ದಾರೆ ಎಂದು ಶಿವರಾಜ್ ತಂಗಡಗಿ ವಿವರಿಸಿದರು.

ಸಮಾರಂಭದಲ್ಲಿ ಪೂಜ್ಯ ಶ್ರೀಭೋದಿದತ್ತ ಭಂತೇಜಿ, ಪೂಜ್ಯ ಶ್ರೀ ಬುದ್ದದತ್ತ ಭಂತೇಜಿ, ಹಿರಿಯ ಸಾಹಿತಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ. ಎಂ.ಗಾಯಿತ್ರಿ ಉಪಸ್ಥಿತರಿದ್ದರು.

ಮಹಾಪುರುಷರ ಸಂದೇಶ ಸಾರಲು ಜಯಂತಿ ಆಚರಣೆ ಪೂರಕ; ಬುದ್ಧ ಜಯಂತಿಯಲ್ಲಿ ಸಚಿವ ತಂಗಡಗಿ ಬಣ್ಣನೆ

ಎಲ್ಲ ಧರ್ಮಗಳಲ್ಲಿ ಭೌದ್ಧ ತತ್ವದ ನೆರಳನ್ನು ಕಾಣಬಹುದು. ಬೌದ್ಧ ಧಮ್ಮದ ಪ್ರಚಾರದ ಅವಶ್ಯಕತೆ ಇಲ್ಲ. ಅದರಲ್ಲಿರುವ ವಿಜ್ಞಾನ ಮತ್ತು ನೈತಿಕ ನೆಲೆಗಳು ಆ ಧರ್ಮವನ್ನು ವಿಶ್ವವ್ಯಾಪಕಗೊಳಿಸುತ್ತಲೇ ಸಾಗಿದೆ. ಆ ಕಾರಣಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಸುದೀರ್ಘ ಅಧ್ಯಯನ ಮಾಡಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು.  ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ಸಾಹಿತಿ

ಸದ್ಯದಲ್ಲೇ ಬೆಂಗಳೂರಿಗೆ ಹೊಸ ರೂಪ; ಡಿಸಿಎಂ ಡಿಕೆಶಿ ಭರವಸೆ,ನೂತನ ಜಲಾಗಾರಕ್ಕೆಶಂಕುಸ್ಥಾಪನೆ

Share This Article
blank

ಬಿಸಾಡುವ ಮುನ್ನ ತಿಳಿಯಿರಿ Watermelon Seeds ಪವರ್​​: ಇದರಲ್ಲಿದೆ 5 ನಂಬಲಾಗದ ಆರೋಗ್ಯ ಪ್ರಯೋಜನೆಗಳು

Watermelon Seeds: ಬೇಸಿಗೆಯಲ್ಲಿ ಬಿಸಿಲು ಜೋರಾದ ತಕ್ಷಣ ದೇಹವನ್ನು ತಂಪಾಗಿಸಲು ನಾವು ಹೆಚ್ಚಾಗಿ ಕಲ್ಲಂಗಡಿಯನ್ನು ಆಶ್ರಯಿಸುತ್ತೇವೆ.…

ಈ ಗಿಡಗಳನ್ನು ಬೆಳೆಸಿದರೆ ಸಾಕು, ನಿಮ್ಮ ಮನೆಗೆ ಒಂದೇ ಒಂದು ಸೊಳ್ಳೆಯೂ ಬರುವುದಿಲ್ಲ..Plants

Plants: ಮಳೆಗಾಲ ಬಂತೆಂದರೆ ಸಾಕು ಅನೇಕ ಜನರು ತಮ್ಮ ಮನೆಯಂಗಳದಲ್ಲಿ ವಿವಿಧ ಗಿಡಗಳನ್ನ ನೆಡಲು ಪ್ರಾರಂಭಿಸುತ್ತಾರೆ.…

blank