ಮಧ್ವಾಚಾರ್ಯ ಜಯಂತಿ ಆಚರಣೆ

udp-13-madwa
Published on

ಉಡುಪಿ: ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತ್ಯುತ್ಸವ ವಿಜಯದಶಮಿ ಪರ್ವಕಾಲದಲ್ಲಿ ಭಾನುವಾರ ವಿವಿಧೆಡೆ ಆಚರಿಸಲಾಯಿತು.

ಉಡುಪಿಯಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಆಚಾರ್ಯ ಮಧ್ವರು ಅದೃಶ್ಯರಾದ ಶ್ರೀ ಅನಂತೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಸಿದರು. ಕಿರಿಯ ಶ್ರೀ ಸುಶ್ರೀಂದ್ರತಿರ್ಥ ಶ್ರೀಪಾದರು ಉಪಸ್ಥಿತರಿದ್ದರು. ನೂರು ಮಂದಿ ವೈದಿಕರಿಂದ ತ್ರಿಶತ ಶ್ರೀವಾಯುಸ್ತುತಿ ಪಾರಾಯಣ ಹಾಗೂ ಪುಷ್ಪಾರ್ಚನೆ ನಡೆಯಿತು. ಸಾಯಂಕಾಲ ರಥಬೀದಿಯಲ್ಲಿ ಆಚಾರ್ಯ ಮಧ್ವರ ಭಾವಚಿತ್ರ ಹಾಗೂ ಗ್ರಂಥಗಳ ರಥೋತ್ಸವ ನಡೆಯಿತು. ಬಳಿಕ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತಿರ್ಥ ಶ್ರೀಪಾದರು ಆಚಾರ್ಯ ಮಧ್ವರ ಕುರಿತು ಉಪನ್ಯಾಸ ನೀಡಿದರು.

ಪಣಿಯಾಡಿ ಶ್ರೀಲಕ್ಷಿ$್ಮ ಅನಂತಾಸನ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಶ್ರೀ ಮಧ್ವ ಜಯಂತಿ ಅಂಗವಾಗಿ ವೇದವ್ಯಾಸ ಐತಾಳ್​ ನೇತೃತ್ವದಲ್ಲಿ ಋತ್ವಿಜರಿಂದ ಶ್ರೀ ವಾಯುಸ್ತುತಿ ಹೋಮ, ವಿಶೇಷ ಪೂಜೆ ನಡೆಯಿತು. ವಿದ್ವಾನ್​ಕೃಷ್ಣರಾಜ ಕುತ್ಪಾಡಿ ಅವರಿಂದ ಆಚಾರ್ಯ ಮಧ್ವರ ತತ್ವ ಚಿಂತನೆ ಪ್ರವಚನ ನಡೆಯಿತು. ಪಾಡಿಗಾರು ಪುತ್ತಿಗೆ ಮಠ, ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲೂ ಮಧ್ವ ಜಯಂತಿ ಆಚರಿಸಲಾಯಿತು.

ಆಸ್ಟ್ರೆಲಿಯಾದಲ್ಲಿ ವಿಶೇಷ ಪೂಜೆ
ಆಸ್ಟ್ರೇಲಿಯಾದ ಪುತ್ತಿಗೆ ಶಾಖಾ ಮಠದಲ್ಲಿ ಮಧ್ವ ಜಯಂತಿ ಸಡಗರದಿಂದ ಆಚರಿಸಲಾಯಿತು. ಆಚಾರ್ಯ ಮಧ್ವರ ಪ್ರತಿಮೆ ಮುಂದೆ ಭಕ್ತರಿಂದ ಸಮಗ್ರ ಮಧ್ವವಿಜಯ ಪಾರಾಯಣ, ವಾಯುಸ್ತುತಿ, ದ್ವಾದಶ ಸ್ತೋತ್ರ ಇತ್ಯಾದಿಗಳ ಪಠಣ ನಡೆಯಿತು. ವಿಶೇಷ ಪೂಜೆ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net