More

    ಕಾಂಗ್ರೆಸ್ ಭದ್ರಕೋಟೆಯಲ್ಲಿ ಜಯಪ್ರಕಾಶ್ ಹೆಗ್ಡೆ ಗೆಲುವು ಶತಸಿದ್ದ

    ಕಡೂರು: ಕಾಂಗ್ರೆಸ್ ರಾಜ್ಯ ಸರ್ಕಾರದ ಜನಪರ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತಯಾಚಿಸುತ್ತಿದ್ದು, ಸಂಘಟಿತಾತ್ಮಕವಾಗಿರುವ ಕಾಂಗ್ರೆಸ್ ಭದ್ರಕೋಟೆಯಲ್ಲಿ ಜಯಪ್ರಕಾಶ್ ಹೆಗ್ಡೆ ಗೆಲುವು ಶತಸಿದ್ದ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.
    ನಿಡಘಟ್ಟದಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಜಿಲ್ಲೆಗೆ ಯಾವ ಕೊಡುಗೆ ದೊರೆತಿದೆ ಎಂಬುದನ್ನು ಹೇಳಬೇಕು. ನಾವು ದ್ವೇಷದ ರಾಜಕಾರಣ ಮಾಡಿಲ್ಲ. ಹಿಂದಿನ ಶಾಸಕರ ಅವಧಿಯಲ್ಲಿ ಕೇವಲ ಕಾಮಗಾರಿಗಳ ಮಂಜೂರು ಮಾತ್ರ ಆಗಿತ್ತು. ನಮ್ಮ ಸರ್ಕಾರ ಅದಕ್ಕೆ ಹಣ ನೀಡಿದೆ. ಮಾಜಿ ಶಾಸಕರ ಸಂಬಂಧಿಗಳೇ ಗುತ್ತಿಗೆದಾರರಾಗಿದ್ದರೂ ಅಭಿವೃದ್ಧಿ ದೃಷ್ಟಿಯಿಂದ ಹಣ ಬಿಡುಗಡೆ ಮಾಡಿಸಿ ಕೆಲಸ ಮುಂದುವರಿಸಲಾಗಿದೆ ಎಂದರು.
    ಜಿಲ್ಲೆಯಲ್ಲಿ ಇಲ್ಲಿಯವರೆಗೆ ನಡೆದಿರುವ ಎಲ್ಲ ಕಾರ್ಯಗಳು ಕಾಂಗ್ರೆಸ್ ಕೊಡುಗೆಯಾಗಿದೆ. ವೈದ್ಯಕೀಯ ಕಾಲೇಜು ಕೂಡ ನಮ್ಮ ಪಕ್ಷದ ಕೊಡುಗೆ. ಜಿಲ್ಲೆಗೆ ಪ್ರಸ್ತುತ ಸರ್ಕಾರದ ಕೊಡುಗೆ ಏನು ಎಂಬುದನ್ನು ಸರ್ಕಾರಕ್ಕೆ ಒಂದು ವರ್ಷದ ನಂತರ ಸಾರ್ವಜನಿಕರಿಗೆ ತಿಳಿಸುತ್ತೇನೆ. ಪ್ರಸ್ತುತ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಲಿದೆ ಎಂದು ತಿಳಿಸಿದರು.
    ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೋಬಳಿ ಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿ ಸಂಘಟನಾತ್ಮಕವಾಗಿ ಪ್ರಚಾರ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು, ರೈತ ಮತ್ತು ಬಡವರ ಪರವಾದ ಸಿದ್ದರಾಮಯ್ಯ ಸರ್ಕಾರದ ಸಾಧನೆ ಹಾಗೂ ಜಯಪ್ರಕಾಶ್ ಹೆಗ್ಡೆ ಅವರು ಸಂಸದರಾಗಿದ್ದಾಗ ಜಿಲ್ಲೆಗೆ ಆದ ಕಾರ್ಯಗಳು ಹಾಗೂ ಹಿಂದಿನ ಸಂಸದರು ಜಿಲ್ಲೆಗೆ ನೀಡಿದ ಶೂನ್ಯ ಕೊಡುಗೆಗಳನ್ನು ಜನತೆ ಎದುರಿಗಿಟ್ಟು ಮತ ಕೇಳುತ್ತೇವೆ. ಕ್ಷೇತ್ರದಲ್ಲಿ ಹೆಚ್ಚು ಮತಗಳ ಮುನ್ನಡೆ ದೊರೆಯಲಿದೆ. ಕಾಂಗ್ರೆಸ್‌ಗೆ ಪೂರಕ ವಾತಾವರಣ ವ್ಯಕ್ತವಾಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts