More

    ದುಡ್ಡು ಸಿಕ್ಕ ತಕ್ಷಣ ಭ್ರಷ್ಟಾಚಾರ ಅಂತ ಹೇಳೋಕ್ಕಾಗಲ್ಲ: ಸಚಿವ ಮಾಧುಸ್ವಾಮಿ ಸಮರ್ಥನೆ

    ಮಂಡ್ಯ: ಬಿಜೆಪಿ ಶಾಸಕ ಮಾಡಾಳ್​​ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್​ ಮಾಡಾಳ್​ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಾನೂನು ಸಚಿವ ಮಾಧುಸ್ವಾಮಿ ದುಡ್ಡು ಸಿಕ್ಕ ಮಾತ್ರಕ್ಕೆ ಭ್ರಷ್ಟಾಚಾರ ಎಂದು ಹೇಳುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ.

    ಮಂಡ್ಯದ ಹುಲಿಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ, 40% ದಂಧೆ ಮಾಡುವುದಕ್ಕೆ ವಿರೂಪಾಕ್ಷ ಅವರೇನು ಮಂತ್ರಿಯಲ್ಲ. ದುಡ್ಡಿಗೆ ಸರಿಯಾದ ದಾಖಲೆ ನೀಡಿದರೆ ನಿಮ್ಮ-ನಮ್ಮ ಮಾತುಗಳು ಬಂದ್ ಆಗುತ್ತವೆ ಎಂದು ಕಾಂಗ್ರೆಸ್​ ವಿರುದ್ಧ ಕಿಡಿಕಾರುವ ಮೂಲಕ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರನ್ನು ಮಾಧುಸ್ವಾಮಿ ಸಮರ್ಥನೆ ಮಾಡಿಕೊಂಡರು.

    ಇದನ್ನೂ ಓದಿ: ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಮಣೆ ಹಾಕುವ ಅಗತ್ಯವಿಲ್ಲ: ಸ್ವಪಕ್ಷ BJP ವಿರುದ್ಧವೇ ಈರಣ್ಣ ಕಡಾಡಿ ಕಿಡಿ

    ನಾವು ಈ ಪ್ರಕರಣದ ಬಗ್ಗೆ ಕಮೆಂಟ್ ಮಾಡುವುದಕ್ಕೆ ಆಗುವುದಿಲ್ಲ. ಈ ಪ್ರಕರಣದಲ್ಲಿ ಶಾಸಕರು, ಸಿಎಂ ಯಾಕೆ ರಾಜೀನಾಮೆ ಕೊಡಬೇಕು? ವಿರೂಪಾಕ್ಷಪ್ಪ ಅವರ ಮಗ ಸರ್ಕಾರಿ ಅಧಿಕಾರಿಯಾಗಿದ್ದಾರೆ‌. ಆತ ದುಡ್ಡು ತೆಗೆದುಕೊಂಡಿದ್ದಾನೆ ಮತ್ತು ಮುಂದಿನ ಪರಿಣಾಮ ಆತನೇ ಎದುರಿಸುತ್ತಾನೆ. ವಿರೂಪಾಕ್ಷಪ್ಪನ ಮಗ ಎಸಿಬಿಯಲ್ಲಿ ಒಬ್ಬ ಅಧಿಕಾರಿಯಾಗಿದ್ದ. ಆತ ಲಂಚ ತೆಗೆದುಕೊಂಡರೆ ವಿರೂಪಾಕ್ಷಪ್ಪ ಏನು ಮಾಡಬೇಕು. ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು? ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು? ಎಂದು ಪ್ರಶ್ನೆ ಮಾಡಿದರು.

    ಇಂತಹ ಅಯೋಗ್ಯರು ಯಾರು ಯಾರು ಇದ್ದಾರೆ ಎಂದು ನಾವು ಹುಡುಕಿಕೊಂಡು‌ ಕೂರುವುದಕ್ಕೆ ಆಗುತ್ತದಾ. 40% ದಂಧೆ ಮಾಡುವುದಕ್ಕೆ ಅವರ್ಯಾರು ಮಂತ್ರಿಯಲ್ಲ. ಆತ ಒಬ್ಬ ಸರ್ಕಾರಿ ಅಧಿಕಾರಿ, ಎಸಿಬಿಯಲ್ಲಿ ಇದ್ದವರು. ಶಾಸಕರಿಗೂ ಮತ್ತು ಮುಖ್ಯಮಂತ್ರಿಗಳಿಗೂ ಇದರಲ್ಲಿ ಸಂಬಂಧವಿಲ್ಲ ಎಂದರು.

    ಮೊದಲು ಭ್ರಷ್ಟಾಚಾರ ಸಾಬೀತು ಆಗಬೇಕು. ಹಣ ಕೊಟ್ಟವರು ಮತ್ತು ತೆಗೆದುಕೊಂಡವರು ಎಲ್ಲ ಹೇಳಿಕೆ ತೆಗೆದುಕೊಳ್ಳಬೇಕು. ಈಗ ಅಧಿಕಾರಿಯ ಮನೆಯ ಮೇಲೆ ರೈಡ್ ಆಗಿದೆ. ಈ ಬಗ್ಗೆ ಅವರು ಸೂಕ್ತ ದಾಖಲೆ ನೀಡಿದರೆ, ನಾಳೆ ನಾವು ನೀವು ಏನು ಮಾತಾಡೋಕೆ ಆಗಲ್ಲ. ದುಡ್ಡಿಗೆ ದಾಖಲೆ ಸರಿಯಾಗಿ ಇದ್ರೆ ನಮ್ಮ ನಿಮ್ಮ ಮಾತುಗಳು ಬಂದ್ ಆಗುತ್ತವೆ ಎಂದು ಹೇಳಿದರು.

    ದುಡ್ಡು ಸಿಕ್ಕ ತಕ್ಷಣ ಭ್ರಷ್ಟಾಚಾರ ಅನ್ನುವುದಕ್ಕೆ ಆಗಲ್ಲ. ಇದು ಯಾವ ದುಡ್ಡು ಎಂದು ಅವರನ್ನು ಕೇಳಲಾಗುತ್ತೆ. ಅವರು ಇದಕ್ಕೆ ನೀಡುವ ಉತ್ತರದ ಮೇಲೆ‌ ಎಲ್ಲ ಇದೆ. ದಾಖಲೆಗಳು ಸರಿಯಾಗಿ ಇಲ್ಲ ಎಂದ್ರೆ ಅದು ಭ್ರಷ್ಟಾಚಾರ ಆಗುತ್ತೆ. ಕಾಂಗ್ರೆಸ್‌ನವರಿಗೆ ಏನು ಇಲ್ಲ, ಅದಕ್ಕೆ ಈ ರೀತಿ ಮಾತನಾಡುತ್ತಾರೆ ಎಂದು ಮಾಧುಸ್ವಾಮಿ ಕಿಡಿಕಾರಿದರು.

    ಇದನ್ನೂ ಓದಿ: ಕಿಚ್ಚನ ಮುಂದಿನ ಸಿನಿಮಾ ಬಿಲ್ಲ ರಂಗ ಬಾಷ! ಅನೂಪ್​ ಭಂಡಾರಿ ಕೊಟ್ಟ ಸುಳಿವಿಗೆ ಸುದೀಪ್​ ಫ್ಯಾನ್ಸ್​ ದಿಲ್​ ಖುಷ್​

    ಏನಿದು ಪ್ರಕರಣ?
    ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಶಾಂತ್ ಮಾಡಾಳ್ ಮನೆಯಲ್ಲಿ 6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ (ಮಾ. 02) ತಡರಾತ್ರಿ ವಶಪಡಿಸಿಕೊಂಡಿದ್ದಾರೆ. ಕೆಎಸ್​ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಅವರನ್ನು 40 ಲಕ್ಷ ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ ಒಟ್ಟು 2.02 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ 6 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ನಾಪತ್ತೆಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪರಿಂದ ರಾಜೀನಾಮೆ!

    ನನ್ನನ್ನು ರೂಮಿಗೆ ಕರೆದು… ಕ್ರಿಸ್ಟಿಯಾನೋ ರೊನಾಲ್ಡೋ ವಿರುದ್ಧ ಗಂಭೀರ ಆರೋಪ ಮಾಡಿದ ಮಾಡೆಲ್!​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts