ಬೆಳಗಾವಿಯಲ್ಲಿ ಅರಣ್ಯ ಇಲಾಖೆ ಕಾಮಗಾರಿಯ ಜೆಸಿಬಿ ಚಾಲಕನನ್ನು ಕಲ್ಲಿನಿಂದ ಜಜ್ಜಿ ಭೀಕರ ಹತ್ಯೆ

ಬೆಳಗಾವಿ: ಅರಣ್ಯ ಕಾಮಗಾರಿಯಲ್ಲಿ ತೊಡಗಿದ್ದ ಜೆಸಿಬಿ ಚಾಲಕನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಕಾತ್ರಾಳ ಬಳಿ ನಡೆದಿದೆ.

ಶ್ರೀಕಾಂತ್​​​ ಕಳ್ಳಿಮನಿ (22) ಕೊಲೆಯಾದ ದುರ್ದೈವಿ. ಬುಧವಾರ ತಡರಾತ್ರಿ ಅರಣ್ಯ ಇಲಾಖೆಯ ಕಾಮಗಾರಿಯಲ್ಲಿ ತೊಡಗಿದ್ದ ಶ್ರೀಕಾಂತ್​​ನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಮಾಡಿ ಪರಾರಿಯಾಗಿದ್ದಾರೆ.

ಕಳೆದ ಒಂದು ವಾರದಿಂದ ಅರಣ್ಯ ಇಲಾಖೆಯ ಕಾಮಗಾರಿಯಲ್ಲಿ ತೊಡಗಿದ್ದ ಶ್ರೀಕಾಂತ್​ ತಡರಾತ್ರಿ ಕೊಲೆಯಾಗಿದ್ದು ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಚಿದಂಬರ ಆಡಿನ್​​​ ಮಾಲೀಕತ್ವದ ಜೆಸಿಬಿಯಲ್ಲಿ ಮೃತ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಪ್ರಕರಣ ಸವದತ್ತಿ ಪೊಲೀಸ್​​ ಠಾಣೆಯಲ್ಲಿ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *