More

    ನಲ್ಲಿ ಸಂಪರ್ಕ ಶೇ.100 ಅನುಷ್ಠಾನವಾಗಲಿ : ಅಧಿಕಾರಿಗಳಿಗೆ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ

    ತುಮಕೂರು : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಜಲ ಜೀವನ್ ಮಿಷನ್’ ಯೋಜನೆಯ ಅನುಷ್ಠಾನ ಜಿಲ್ಲೆಯಲ್ಲಿ ಮೈಲಿಗಲ್ಲಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ‘ಜಲ ಜೀವನ್ ಮಿಷನ್ ಯೋಜನೆ, ಎನ್‌ಆರ್‌ಡಿಡಬ್ಲ್ಯುಪಿ, ಎಸ್‌ಡಿಪಿ, ಎಂವಿಎಸ್, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಶುದ್ಧ ಕುಡಿಯುವ ನೀರಿನ ಟಕಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

    ನೀರಿನ ಮೂಲಾಧಾರದ ಮೇಲೆ ಗ್ರಾಮಗಳಿಗೆ ಕುಡಿಯುವ ನೀರು ಕಲ್ಪಿಸಲು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಗ್ರಾಮಗಳ ಪ್ರತಿ ಮನೆಗೂ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಈ ಯೋಜನೆ ಉದ್ದೇಶ ನೂರರಷ್ಟು ಯಶಸ್ವಿಗೊಳ್ಳಬೇಕು ಎಂದರು.

    ಯೋಜನೆಯಡಿ ಓವರ್ ಹೆಡ್ ಟ್ಯಾಂಕ್ ನಿರ್ವಾಣಕ್ಕೆ ಒತ್ತು ಕೊಡಬೇಕು, ಈಗಾಗಲೇ ಕಾಮಗಾರಿ ಮುಗಿದಿರುವ ಗ್ರಾಮಗಳಲ್ಲಿ ಓವರ್ ಹೆಡ್ ಟ್ಯಾಂಕ್‌ಗಳಿಗೆ ನೀರಿನ ಸಂಪರ್ಕ ಕಲ್ಪಿಸಿ, ಮನೆ ಮನೆಗೂ ನೀರು ಸರಬರಾಜು ವಾಡಲು ಸೂಕ್ತ ಕ್ರಮ ವಹಿಸಬೇಕು. ಈ ಕಾರ್ಯ ಇನ್ನೊಂದು ತಿಂಗಳ ಒಳಗೆ ಪೂರ್ಣಗೊಳಿಸಬೇಕು. ಹಾಗೆಯೇ ರಿಪೇರಿಗೆ ಬಂದಿರುವ ಓವರ್ ಹೆಡ್ ಟ್ಯಾಂಕ್‌ಗಳನ್ನು ದುರಸ್ತಿಗೊಳಿಸಬೇಕು. ಎಲ್ಲ ಓವರ್‌ಹೆಡ್ ಟ್ಯಾಂಕ್‌ಗಳ ಬಳಿ ಸಂಪ್ ನಿರ್ಮಿಸಿ, ಆ ಮೂಲಕ ಸ್ವಚ್ಛತೆ ಕಾಪಾಡಿ ಶುದ್ಧ ಕುಡಿಯುವ ನೀರು ಒದಗಿಸಬೇಕು. ಪ್ರಸ್ತಾವನೆ ಹಂತದಲ್ಲಿರುವ ಓವರ್ ಹೆಡ್ ಟ್ಯಾಂಕ್‌ಗಳಿಗೆ ಟೆಂಡರ್ ಕರೆದು ಕಾಮಗಾರಿ ಆರಂಭಿಸಿ ಕಾಲಮಿತಿಯೊಳಗೆ ಮುಗಿಸಬೇಕು ಎಂದು ನಿರ್ದೇಶಿಸಿದರು.

    ವಿಲವಾದ ಕೊಳವೆ ಬಾವಿಗಳ ಸ್ಥಿತಿಗತಿ ಕುರಿತು ಅವಲೋಕಿಸಿದ ಸಚಿವರು, ವಿಫಲಗೊಂಡ ಕೊಳವೆ ಬಾವಿಗಳ ಪಂಪ್, ಮೋಟಾರ್, ಕೇಬಲ್ ಸೇರಿ ಇತರ ಸಲಕರಣೆಗಳ ಮಾಹಿತಿ ಸಮರ್ಪಕವಾಗಿ ಒದಗಿಸಬೇಕು. ಈ ಸಲಕರಣೆಗಳನ್ನು ಹೊಸ ಕೊಳವೆ ಬಾವಿಗಳಿಗೆ ಬಳಕೆ ವಾಡಬೇಕು. ಆ ಮೂಲಕ ಹಣ ಉಳಿತಾಯ ವಾಡಿ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಉಪಯೋಗಿಸಬೇಕು ಎಂದು ಸೂಚಿಸಿದರು.

    ಓವರ್ ಹೆಡ್ ಟ್ಯಾಂಕ್ ಮೂಲಕ ಈಗಾಗಲೇ ನೀರು ಒದಗಿಸಲು ಪೈಪ್ ಲೈನ್ ಅಳವಡಿಕೆ ಪೂರ್ಣಗೊಂಡಿರುವ ಗ್ರಾಮಗಳಲ್ಲಿ ಬಿಟ್ಟು ಹೋಗಿರುವ ಮನೆಗಳಿಗೆ ಪೈಪ್ ಲೈನ್ ಅಳವಡಿಸಿ ನಲ್ಲಿ ಸಂಪರ್ಕಿಸುವ ಕಾರ್ಯ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು.

    ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾತನಾಡಿ, ಶ್ರೀವಾಗಿ ಕಾಲಮಿತಿಯೊಳಗೆ ಜಲಜೀವನ್ ಮಿಷನ್ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಯೋಜನೆಯ ಗುರಿ ನಿಗದಿಪಡಿಸಿ ಆ ಮೂಲಕ ಕಾಲಮಿತಿಯೊಳಗೆ ಕಾರ್ಯಾನುಷ್ಠಾನಕ್ಕೆ ತರಲು ಕ್ರಮ ವಹಿಸಬೇಕು ಎಂದರು. ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ, ಜಿಪಂ ಉಪಕಾರ್ಯದರ್ಶಿ ಟಿ.ಕೆ. ರಮೇಶ್, ಕಾರ್ಯಪಾಲಕ ಅಭಿಯಂತರ ಮುತ್ತಪ್ಪ ಮತ್ತಿತರರು ಭಾಗವಹಿಸಿ ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts