More

    ಜೆಡಿಎಸ್ ನಿರ್ನಾಮ ಮಾಡುವುದೇ ಗುರಿ:ಪರಿಷತ್‌ಗೆ ಆಯ್ಕೆಯಾಗಿರುವ ರವಿ ಹೇಳಿಕೆ ಚಾಮುಂಡೇಶ್ವರಿ ದೇವಿಗೆ ಪೂಜೆ

    ಹಾರೋಹಳ್ಳಿ : ಮುಂದಿನ ದಿನಗಳಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳುವುದೇ ನಮ್ಮ ಗುರಿ ಎಂದು ಪರಿಷತ್‌ಗೆ ಆಯ್ಕೆಯಾಗಿರುವ ಎಸ್.ರವಿ ಹೇಳಿದರು.
    ಕನಕಪುರ ತಾಲೂಕಿನ ಹಾರೋಹಳ್ಳಿಯ ಚಾಮುಂಡೇಶ್ವರಿ ದೇವಾಲಯದಲ್ಲಿ ಬುಧವಾರ ಪೂಜೆ ಸಲ್ಲಿಸಿ ಅಭಿನಂದನೆ ಸ್ವೀಕರಿಸಿ ಬಳಿಕ ಮಾತನಾಡಿದರು.

    ಹ್ಯಾಟ್ರಿಕ್ ಗೆಲುವು ಸಾಧಿಸಲು ಕಾರ್ಯಕರ್ತರು ಮುಖಂಡರು ಒಮ್ಮತದಿಂದ ಶ್ರಮಿಸಿದ್ದೀರಿ. ಇದೇ ಹುಮ್ಮಸ್ಸಿನಲ್ಲಿ ಕೆಲಸ ಮಾಡಿ ರಾಮನಗರ ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಲು ಇಂದಿ ನಿಂದಲೇ ತಯಾರಿ ನಡೆಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ನೇತೃತ್ವದಲ್ಲಿ ಜಿಲ್ಲೆ ಯಲ್ಲಿ ಜೆಡಿಎಸ್ ನಿರ್ನಾಮ ಮಾಡು ವುದೇ ಗುರಿಯಾಗಿದ್ದು, ಎಚ್. ಡಿ. ಕುಮಾರ ಸ್ವಾಮಿ ಅವರನ್ನು ಹಾಸನಕ್ಕೆ ಓಡಿಸುವ ಕೆಲಸ ಮಾಡಬೇಕಿದೆ ಎಂದರು.
    ಮುಂದಿನ ದಿನಗಳಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕು. ಪಕ್ಷಕ್ಕೆ ಯಾರು ಬಂದರೂ ಸ್ವಾಗತಿಸಿ, ಬಲಪಡಿಸುವ ಕೆಲಸ ಮಾಡಬೇಕು. ಹಣದ ಹೊಳೆ ಹರಿಸಿದರೂ ಕಾಂಗ್ರೆಸ್ ಕಾರ್ಯಕರ್ತರು ಕೈ ಹಿಡಿದಿದ್ದಾರೆ. ಅಭಿವೃದ್ಧಿ ಕೆಲಸ ಮಾಡಲು ಇದು ಸಹಕಾರಿಯಾಗಿದೆ ಎಂದರು.

    ಬಮುಲ್ ನಿರ್ದೇಶಕ ಎಚ್.ಎಸ್.ಹರೀಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಗದೀಶಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆಸಿಬಿ ಅಶೋಕ, ಹಿರಿಯ ಮುಖಂಡ ಕೀರಣಗೆರೆ ಜಗದೀಶ್, ಮೋಹನಹೊಳ್ಳ, ಗ್ರಾಪಂ ಮಾಜಿ ಅಧ್ಯಕ್ಷ ಎನ್.ಗುರುಪ್ರಸಾದ್, ವಿಎಸ್‌ಎಸ್‌ಎನ್ ನಿರ್ದೇಶಕ ಎಚ್.ಸಿ. ಶೇಖರ್, ಗ್ರಾಪಂ ಮಾಜಿ ಸದಸ್ಯ ಕೊಟೆಕುಮಾರ್, ಗ್ರಾಪಂ ಮಾಜಿ ಉಪಾಧ್ಯಕ್ಷ ಲೋಕೇಶ್, ಗ್ರಾಮಸ್ಥರು, ಹಾರೋಹಳ್ಳಿ ಮರಳವಾಡಿ ಹೋಬಳಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

    ರಾಮನಗರ :  ಜಾತ್ಯತೀತ ಜನತಾದಳದ ಮುಖಂಡ ಎಚ್.ಡಿ. ಕುಮಾರಸ್ವಾಮಿ ಸೇರಿ ಪಕ್ಷದ ನಾಯಕರ ಗೊಂದಲದ ಹೇಳಿಕೆಗಳು ಮತದಾರರು ಜೆಡಿಎಸ್ ತಿರಸ್ಕರಿಸಲು ಕಾರಣವಾಗಿದೆ ಎಂದು ವಿಧಾನ ಪರಿಷತ್ ಚುನಾವಣೆ ವಿಜೇತ ಕಾಂಗ್ರೆಸ್‌ನ ಎಸ್.ರವಿ ಹೇಳಿದರು.

    ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು, ಮುಖಂಡ ರಿಂದ ಬುಧವಾರ ಅಭಿನಂದನೆ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಜೆಡಿಎಸ್ ಮತ್ತು ಬಿಜೆಪಿ ನೇರ ಒಪ್ಪಂದ ಮಾಡಿಕೊಂಡಿದ್ದವು. ಆ ಎರಡು ಪಕ್ಷಗಳ ನಾಯಕರಲ್ಲಿಯೇ ಸ್ಪಷ್ಟತೆ ಇರಲಿಲ್ಲ. ಮತದಾರರನ್ನು ಗೊಂದಲಕ್ಕೆ ಒಳಗಾಗುವಂತೆ ಮಾಡಲು ಯತ್ನಿಸಿದ್ದರು ಎಂದು ರವಿ ಹೇಳಿದರು.

    ಡಿ.ಕೆ.ಶಿವಕುಮಾರ್ ರಾಜ್ಯ ಕಾಂಗ್ರೆಸ್ ಚುಕ್ಕಾಣಿ ಹಿಡಿದ ನಂತರ ಉಪಚುನಾವಣೆ ಸೇರಿ ಗ್ರಾಮಮಟ್ಟದ ಸಹಕಾರ ಸಂಘಗಳವರೆಗೆ ಪಕ್ಷ ಯಶಸ್ಸು ಕಾಣುತ್ತಿದೆ. ಸಿಎಂ ಬೊಮ್ಮಾಯಿ ಅವರ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ಬಿಜೆಪಿಯ ಅಸ್ತಿತ್ವ ಅಲ್ಲಾಡುವಂತಾಗಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್, ನಗರಸಭೆ ಅಧ್ಯಕ್ಷೆ ಬಿ.ಸಿ.ಪಾರ್ವತಮ್ಮ, ಸದಸ್ಯ ಕೆ.ಶೇಷಾದ್ರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಚ್.ರಾಜು, ಮುಖಂಡರಾದ ಸಯ್ಯದ್ ಜಿಯಾವುಲ್ಲಾ, ಎ.ಬಿ.ಚೇತನ್ ಕುಮಾರ್, ಕೆ.ರಮೇಶ್, ವಿಜಯದೇವ್, ವಿಷ್ಣುಮೂರ್ತಿ, ಗಂಗಾಧರ್, ಸುನಿಲ್, ಪ್ರಮೋದ್, ಮುತ್ತರಾಜು, ಮಹೇಂದ್ರ, ನಿಜಾಂ ಷರೀಫ್ ಇದ್ದರು.

    ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನ ಪರಿಷತ್ ಚುನಾವಣೆ ವಿಜೇತ ಕಾಂಗ್ರೆಸ್‌ನ ರವಿ ಸುದ್ದಿಗೋಷ್ಠಿ ನಡೆಸಿದರು. ಮುಖಂಡರಾದ ಇಕ್ಬಾಲ್ ಹುಸೇನ್, ಸೈಯದ್ ಜಿಯಾವುಲ್ಲಾ, ನಗರಸಭೆ ಅಧ್ಯಕ್ಷೆ ಬಿ.ಸಿ.ಪಾರ್ವತಮ್ಮ, ನಗರಸಭಾ ಸದಸ್ಯ ಕೆ.ಶೇಷಾದ್ರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಇತರರು ಇದ್ದರು.

     

    ಸಂಘಟಿತ ಶ್ರಮ ನನ್ನ ಗೆಲುವಿಗೆ ಕಾರಣ:  ಕಾಂಗ್ರೆಸ್ ಎಂದೂ ಹೊಂದಾಣಿಕೆ ರಾಜಕೀಯ ಮಾಡಿಲ್ಲ. ಜೆಡಿಎಸ್ ನಾಯಕರಿಗೆ ಸ್ಪಷ್ಟತೆ ಇಲ್ಲ. ಒಮ್ಮೆ ಕಾಂಗ್ರೆಸ್ ತೆ ಮತ್ತೊಮ್ಮೆ ಬಿಜೆಪಿ ತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಇದರಿಂದ ಮತದಾರರು ಕಾಂಗ್ರೆಸ್‌ನತ್ತ ವಾಲುತ್ತಿದ್ದಾರೆ. ಪಕ್ಷದ ನಾಯಕರ ಮಾರ್ಗದರ್ಶನ, ಪರಿಶ್ರಮ ಸೇರಿ ಕಾರ್ಯಕರ್ತರ ಸಂಘಟಿತ ಶ್ರಮ ನನ್ನ ಗೆಲುವಿಗೆ ಕಾರಣವಾಗಿದೆ. 700ಕ್ಕೂ ಹೆಚ್ಚಿನ ಮತಗಳ ಅಂತರದ ಗೆಲುವು ಲಭಿಸಿದೆ ಎಂದು ರವಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts