More

    ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

    ಮಡಿಕೇರಿ: ಕರೊನಾ ಸೋಂಕಿನಿಂದಾಗಿ ಕೊಡಗಿನಲ್ಲಿ ಸೀಲ್‌ಡೌನ್ ಆದ ಪ್ರದೇಶದಲ್ಲಿ ಸಂಕಷ್ಟ ಎದುರಿಸುತ್ತಿರುವವರಿಗೆ ಸರ್ಕಾರದಿಂದ ಪಡಿತರ ಸಾಮಗ್ರಿ ಹಾಗೂ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

    ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

    ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾರ್ವಜನಿಕರು ಆತಂಕದಲ್ಲಿದ್ದಾರೆ. ಅಲ್ಲದೆ ಸಿಲ್‌ಡೌನ್ ಆದ ಪ್ರದೇಶದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ಪಡಿತರ ಸಾಮಗ್ರಿಗಳಿಲ್ಲದೆ ಜನರು ಪರದಾಡುವಂತಾಗಿದೆ. ಆದ್ದರಿಂದ ಸರ್ಕಾರ ಸೀಲ್‌ಡೌನ್ ಆದ ಪ್ರದೇಶಕ್ಕೆ ಪಡಿತರ ಸಾಮಗ್ರಿ ಹಾಗೂ ಅಗತ್ಯ ವಸ್ತುಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದರು.

    ಸರ್ಕಾರ ಹಾಗೂ ಈ ವ್ಯಾಪ್ತಿಯ ಶಾಸಕದ್ವಯರು ನಿರ್ಲಕ್ಷೃ ವಹಿಸಿದ್ದಾರೆ. ಲಾಕ್‌ಡೌನ್ ಸಂದರ್ಭ ಬಡಜನರು ಹಸಿವಿನಿಂದ ಸತ್ತರೆ ರಾಜ್ಯ ಸರ್ಕಾರವೇ ನೇರ ಹೊಣೆ. ಜಿಲ್ಲಾಡಳಿತ ಬೇಡಿಕೆ ಈಡೇರಿಸದಿದ್ದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗ ಮಲಗುವ ಮೂಲಕ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

    ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಯುವ ಘಟಕ ಪ್ರಧಾನ ಕಾರ್ಯದರ್ಶಿ ಜಾಸಿರ್, ಜಿಲ್ಲಾ ಕಾರ್ಯದರ್ಶಿ ಸುನೀಲ್ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts