ಗುತ್ತಿಗೆದಾರರಿಗೆ ಕಾಂಗ್ರೆಸ್ ಸರ್ಕಾರದಿಂದ ಕಿರುಕುಳ: ಜೆಡಿಎಸ್ ಆರೋಪ|Harassment

JDS LOGO
Published on

ಬೆಂಗಳೂರು: ಯುದ್ಧದ ಸಂದರ್ಭದಲ್ಲಿ ಗುತ್ತಿಗೆದಾರರಿಗೆ ಕಾಂಗ್ರೆಸ್ ಸರ್ಕಾರ ಕಿರುಕುಳ ನೀಡುತ್ತಿದೆ(JDS alleges harassment of contractors by Congress government) ಎಂದು ಜೆಡಿಎಸ್(JDS)ಆರೋಪಿಸಿದೆ.

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಕಲೆಕ್ಷನ್ ಶುರುವಾಗಿದೆ. ಕರ್ನಾಟಕವನ್ನು ಎಟಿಎಂನಂತೆ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಹೈಕಮಾಂಡ್ ಬಿಹಾರ ಚುನಾವಣೆಗಾಗಿ ರಾಜ್ಯದಲ್ಲಿ ಫಂಡ್ ಕಲೆಕ್ಷನ್ ಮಾಡುತ್ತಿದೆ ಎಂದು ಟೀಕಿಸಿದೆ.

ಹೈಕಮಾಂಡ್ ಮುಂದೆ ವರ್ಚಸ್ಸು ಎಚ್ಚಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಾ ಮುಂದು ತಾ ಮುಂದು ಎಂದು ಪೈಪೋಟಿಗೆ ಇಳಿದು ರಾಜ್ಯದಲ್ಲಿ ಗುತ್ತಿಗೆದಾರರಿಗೆ ಕಿರುಕುಳ, ಬೆದರಿಕೆ ಹಾಕಿ ಶೇ.60 ಲೆಕ್ಕದಲ್ಲಿ ವಸೂಲಿಗೆ ಇಳಿದಿದ್ದಾರೆ ಎಂದು ದೂರಿದೆ.

ಕಮಿಷನ್ ಕಾಂಗ್ರೆಸ್ ಮಂತ್ರಿಗಳಿಗೆ ಇಲಾಖಾವಾರು ಟಾರ್ಗೆಟ್ ಫಿಕ್ಸ್ ಮಾಡಿ, ಗುತ್ತಿಗೆದಾರರ ಬಿಲ್ ಪಾಸ್ ಮಾಡಲು ಪರ್ಸಂಟೇಜ್ ವ್ಯವಹಾರದ ಮೂಲಕ ಲೂಟಿಯಲ್ಲಿ ನಿರತವಾಗಿದೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಗಾರ್ಡನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಜೋರಾಗಿದೆ. ಅದಕ್ಷ ಕಾಂಗ್ರೆಸ್ ಸರ್ಕಾರದ ಅರಾಜಕತೆಯಲ್ಲಿ ಕಾನೂನು ಸುವ್ಯವಸ್ಥೆ ಈಗಾಗಲೇ ಸಂಪೂರ್ಣ ಕುಸಿದಿದೆ. ಇನ್ನೊಂದು ಕಡೆ ಡ್ರಗ್ ಪೆಡ್ಲರ್‌ಗಳು ರಾಜಾರೋಷವಾಗಿ ಗಾಂಜಾ, ಎಂಡಿಎಂಎ ಡ್ರಗ್ಸ್ ಸೇರಿದಂತೆ ಇನ್ನಿತರ ಮಾದಕ ವಸ್ತುಗಳ ಅಕ್ರಮ ಮಾರಾಟ ಎಗ್ಗಿಲ್ಲದೆ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ನಿಯಂತ್ರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net