More

    ಸ್ಥಳೀಯರ ಒತ್ತಾಯದ ಮೇರೆಗೆ ಎಚ್ಡಿಕೆ ಸ್ಪರ್ಧೆ: ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಹೇಳಿಕೆ

    ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದು, ಅವರ ಗೆಲುವಿಗೆ ಎರಡು ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು ಎಂದು ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಮನವಿ ಮಾಡಿದರು.
    ತಾಲೂಕಿನ ಹುಲಿವಾನ ಗ್ರಾಮದಲ್ಲಿ ಆಯೋಜಿಸಿದ್ದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಹಾಲು ಜೇನು ಇದ್ದ ರೀತಿ. ಎರಡು ಪಕ್ಷದ ಕಾರ್ಯಕರ್ತರು ಸಹೋದರರ ರೀತಿ ಒಂದು ಕುಟುಂಬವಿದ್ದAತೆ. ಕುಮಾರಸ್ವಾಮಿ ಅವರ ಗೆಲುವಿಗೆ ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು.
    ಸ್ಥಳೀಯರನ್ನು ಅಭ್ಯರ್ಥಿ ಮಾಡಬೇಕೆಂದು ಕುಮಾರಸ್ವಾಮಿ ನಿರ್ಧರಿಸಿದ್ದರು. ಆದರೆ ಸ್ಥಳೀಯ ನಾಯಕರ ಒತ್ತಾಯದ ಮೇರೆಗೆ ಏ.೪ ರಂದು ಬಿಜೆಪಿ-ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಬಹಿರಂಗ ಸಭೆ ಉದ್ದೇಶಿಸಿ ಎರಡು ಪಕ್ಷದ ನಾಯಕರು ಮಾತನಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬೂತ್ ಮಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದರು.
    ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಮಾತನಾಡಿ, ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಮಂತ್ರಿಯಾಗುವ ಜತೆಗೆ ಎಚ್.ಡಿ.ಕುಮಾರಸ್ವಾಮಿ ಅವರು ಮಂತ್ರಿ ಆಗುವುದು ಶತಸಿದ್ಧ. ಈಗಾಗಲೇ ಬೆಂಗಳೂರು ಹಾಗೂ ಮಂಡ್ಯದಲ್ಲಿ ಸಮನ್ವಯ ಸಮಿತಿ ಸಭೆಗಳು ನಡೆದಿದ್ದು ಈಗ ಹೋಬಳಿ ಮಟ್ಟದಲ್ಲಿ ನಡೆಯುತ್ತಿದೆ. ಎರಡು ಪಕ್ಷದ ಕಾರ್ಯಕರ್ತರು ಭಿನ್ನಾಭಿಪ್ರಾಯವನ್ನು ಬದಿಗೊತ್ತಿ ಕುಮಾರಸ್ವಾಮಿ ಅವರನ್ನು ಹೆಚ್ಚು ಅಂತರದಿAದ ಗೆಲುವಿಗೆ ಶ್ರಮಿಸಬೇಕು ಎಂದು ತಿಳಿಸಿದರು.
    ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಾಧ್ಯಕ್ಷ ವಸಂತರಾಜ್ ಮಾತನಾಡಿ, ಇಂದು ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಿದೆ. ಆದರೆ ಕುಮಾರಸ್ವಾಮಿ ಅವರು ಹಿಂದೆ ಪ್ರತಿ ಮನೆಗೆ ಎರಡು ಲಕ್ಷ ರೂವರೆಗೂ ಸಾಲ ಮನ್ನಾ ಮಾಡಿದ್ದಾರೆ. ಇನ್ನು ಕೆಆರ್‌ಎಸ್‌ನಲ್ಲಿ ೯೦ ಅಡಿ ನೀರು ಇದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಜಾನುವಾರುಗಳಿಗೆ ನೀರು ಬಿಡುತ್ತಿಲ್ಲ. ಹಿಂದೆ ೭೪ ಅಡಿ ನೀರು ಇದ್ದಾಗಲೂ ನೀರಿಗೆ ಬಿಟ್ಟಿದ್ದಾರೆ ಎಂದು ತಿಳಿಸಿದರು.
    ತಾ.ಪಂ ಮಾಜಿ ಸದಸ್ಯ ಎಂ.ಜಿ.ತಿಮ್ಮೇಗೌಡ ಮಾತನಾಡಿ, ಏ.೨೬ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿದರೆ ಕೇಂದ್ರ ಕೃಷಿ ಸಚಿವರಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
    ಮನ್‌ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನAದನ್, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ, ಭೀಮೇಶ್, ಶಿವಕುಮಾರ್ ಆರಾಧ್ಯ, ಮನು, ಬೂದನೂರು ಸ್ವಾಮಿ, ಮಹೇಶ್, ಆನಂದ್, ಪುಟ್ಟಸ್ವಾಮಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts