More

    ವಿದ್ಯಾರ್ಥಿನಿ ನೇಹಾ ಹತ್ಯೆಗೆ ಖಂಡನೆ: ಕೆರಗೋಡು ಗ್ರಾಮದಲ್ಲಿ ಪ್ರತಿಭಟನೆ

    ಮಂಡ್ಯ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹ ಹೀರೆಮಠ್ ಹತ್ಯೆ ಖಂಡಿಸಿ ಹಾಗೂ ಕೊಲೆ ಮಾಡಿದ ಫಯಾಜ್‌ನನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಗ್ರಾಮದಲ್ಲಿ ಜಮಾಯಿಸಿದ ಜೆಡಿಎಸ್, ಬಿಜೆಪಿ ಹಾಗೂ ಹಿಂದುಪರ ಕಾರ್ಯಕರ್ತರು ಘಟನೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಹೆಣ್ಣುಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ, ಹತ್ಯೆ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಕೂಡಲೇ ಸಿಎಂ, ಡಿಸಿಎಂ, ಗೃಹಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
    ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮುಸ್ಲಿಮರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರದರ್ಸ್ ಎನ್ನುತ್ತಾರೆ. ಹಾಗಿದ್ದರೆ ಅವರನ್ನು ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಿ ಹಿಂದುಗಳ ರಕ್ಷಣೆ ಮಾಡಿ. ಅಂತೆಯೆ ವಿದ್ಯಾರ್ಥಿನಿ ಹತ್ಯೆ ಮಾಡಿದವನನ್ನು ತಕ್ಷಣವೇ ಗಲ್ಲಿಗೇರಿಸಿ. ಇಲ್ಲದಿದ್ದರೆ ಜಿಲ್ಲಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
    ಪ್ರತಿಭಟನೆಯಲ್ಲಿ ಮನ್‌ಮುಲ್ ಉಪಾಧ್ಯಕ್ಷ ರಘುನಂದನ್, ಶಿವಕುಮಾರ್ ಆರಾಧ್ಯ, ರಾಜೇಶ್, ಪಂಚಲಿಂಗೇಗೌಡ, ವಿಜಯ್, ಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts