ಮೂವರು ಅತೃಪ್ತ ಶಾಸಕರ ಮೇಲೆ ಅನರ್ಹತೆ ಅಸ್ತ್ರ ಪ್ರಯೋಗಕ್ಕೆ ಮುಂದಾದ ಜೆಡಿಎಸ್​

ಬೆಂಗಳೂರು: ರಾಜೀನಾಮೆ ನೀಡಿದ ಮುಂಬೈಗೆ ತೆರಳಿದ್ದ ಜೆಡಿಎಸ್​ನ ಮೂವರು ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯಿದೆಯನ್ವಯ ಅನರ್ಹತೆ ಅಸ್ತ್ರ ಪ್ರಯೋಗಿಸಲು ಜೆಡಿಎಸ್​ ನಾಯಕರು ನಿರ್ಧರಿಸಿದ್ದು, ಈ ಸಂಬಂಧ ಸ್ಪೀಕರ್​ ರಮೇಶ್​ ಕುಮಾರ್​ಗೆ ದೂರು ನೀಡಿದ್ದಾರೆ.

ಜೆಡಿಎಸ್​ನ ಮಾಜಿ ರಾಜ್ಯಾಧ್ಯಕ್ಷ ಎಚ್​. ವಿಶ್ವನಾಥ್​, ಗೋಪಾಲಯ್ಯ ಮತ್ತು ನಾರಾಯಣ ಗೌಡ ಕಾಂಗ್ರೆಸ್​ನ ಅತೃಪ್ತ ಶಾಸಕರ ಜತೆಯಲ್ಲಿ ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದರು. ಜೆಡಿಎಸ್​ ಮುಂಖಡರು ಅವರನ್ನು ಮನವೊಲಿಸಲು ನಡೆಸಿದ ಪ್ರಯತ್ನ ಸಫಲವಾಗಿಲ್ಲ. ಈ ಹಿನ್ನೆಲೆಯಲ್ಲಿ ಜೆಡಿಎಸ್​ ಮುಖಂಡರು ಕಾಂಗ್ರೆಸ್​ ದಾರಿ ಹಿಡಿದಿದ್ದು, ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಗುರುವಾರ ಸಂಜೆ ಸ್ಪೀಕರ್​ಗೆ ದೂರು ನೀಡಿದ್ದಾರೆ.

ಸುಪ್ರೀಂ ಕೋರ್ಟ್​ ನಿರ್ದೇಶನದಂತೆ ಅತೃಪ್ತ ಶಾಸಕರು ಈಗ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಸ್ಪೀಕರ್​ ಅವರನ್ನು ಭೇಟಿ ಮಾಡಿ ಮತ್ತೊಮ್ಮೆ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ.

ಇದೇ ಸಂದರ್ಭದಲ್ಲಿ ನಾಳೆಯಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್​ ಪಕ್ಷದ ಶಾಸಕರೆಲ್ಲರಿಗೂ ಅಧಿವೇಶನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ವಿಪ್​ ಜಾರಿ ಮಾಡಲಾಗಿದೆ.

Leave a Reply

Your email address will not be published. Required fields are marked *