More

    ಎನ್​ಡಿಎ ಜತೆ ಜೆಡಿಎಸ್​ ವಿಲೀನ: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ ಸ್ಫೋಟ

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್​ ಅನ್ನು ಹಣಿಯುವ ಉದ್ದೇಶದಿಂದ ಬಿಜೆಪಿ ಜತೆ ಜೆಡಿಎಸ್‌ ವಿಲೀನ ಆಗಲಿದೆ. ಈ ಬಗ್ಗೆ ಶೀಘ್ರವೇ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಚರ್ಚೆಯಾಗುತ್ತಿದೆ.

    ಬಿಜೆಪಿ ಜತೆ ಜೆಡಿಎಸ್​ ಕೈ ಜೋಡಿಸಲಿದೆ ಎಂದು ಇತ್ತೀಚಿಗೆ ಹರಿದಾಡಿದ ಸುದ್ದಿಯನ್ನು ಎಚ್​ಡಿಕೆ, ಅಲ್ಲಗೆಳೆದಿದ್ದರೂ ಯಾವುದೇ ರಾಜಕೀಯ ಬೆಳವಣಿಗೆ ಸಂಭವಿಸಬಹುದು ಎನ್ನುವ ಮೂಲಕ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಹೇಳಿಕೆ ಕೊಟ್ಟಿದ್ದರು. ಇದರ ಬೆನ್ನಲ್ಲೇ ಎನ್​ಡಿಎಗೆ ಮಿತ್ರಪಕ್ಷವಾಗಲು ಜೆಡಿಎಸ್​ಗೆ ಆಸಕ್ತಿ ಇದೆ ಎಂಬುದು ಜೆಡಿಎಸ್​ನ ಉನ್ನತ ಮೂಲಗಳಿಂದ ಹೊರಬೀಳುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ತರೇಹವಾರಿ ಚರ್ಚೆಯಾಗುತ್ತಿದೆ. ಇದೆಲ್ಲಕ್ಕೂ ಪೂರ್ಣ ವಿರಾಮ ಹಾಕಲು ಮುಂದಾದ ಎಚ್​ಡಿಕೆ, ಭಾನುವಾರ ಮಹತ್ತರ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿರಿ ಮುಖದಲ್ಲಿ ಮೊಡವೆ ಹೆಚ್ಚಾಗಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!

    ‘ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು ಎಂದು ಎಚ್​ಡಿಕೆ ಕಿಡಿಕಾರಿದ್ದಾರೆ.

    ‘1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ಜನತಾದಳಕ್ಕೆ ಬೆಂಬಲ ನೀಡುವುದಾಗಿ ದೇವೇಗೌಡರಿಗೆ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ’ ಎಂದು ಆಕ್ರೋಶ ಹೊರಹಾಕಿದ್ದಾರೆ.

    ‘ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾಪಂ ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷ ಸಂಘಟನೆ ಮಾತ್ರ’ ಎಂದು ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

    ಮನೆ ಮೇಲೆ ಉರುಳಿದ ಮದುವೆ ದಿಬ್ಬಣದ ಬಸ್, ಐವರು ಸ್ಥಳದಲ್ಲೇ ಸಾವು

    ವರ್ಷಾಚರಣೆಗೆ ಕೇಕ್​ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ

    ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ 5 ವರ್ಷವಲ್ಲ! ಮತ್ತೆಷ್ಟು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts