More

    ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಪರ ಪತ್ನಿ, ಪುತ್ರ, ಸೊಸೆ ಮತಯಾಚನೆ

    ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕ್ಯಾತನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅರಳಕುಪ್ಪೆ, ಸೀತಾಪುರ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಪರವಾಗಿ ಪತ್ನಿ ನಾಗಮ್ಮ, ಪುತ್ರ ಸಿ.ಪಿ.ಶಿವರಾಜು, ಸೊಸೆ ತನುಶ್ರೀ ಪ್ರಚಾರ ನಡೆಸಿದರು.
    ಜಾಗಟೆಮಲ್ಲೇನಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಹಾಗೂ ಅರಳಕುಪ್ಪೆಯ ಈಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿದರು.
    ಸಿ.ಪಿ.ಶಿವರಾಜು ಮಾತನಾಡಿ, ಸಿ.ಎಸ್.ಪುಟ್ಟರಾಜು ಅವರು ಶಾಸಕರಾಗಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇವೆ. ಕೋವಿಡ್‌ನಂತಹ ಮಹಾಮಾರಿ ಬಂದಂತಹ ಸಂದರ್ಭದಲ್ಲಿ ಕ್ಷೇತ್ರದಲ್ಲಿಯೇ ಇದ್ದು ಜನರ ಕಷ್ಟ ಸುಖ ಆಲಿಸುವ ಕೆಲಸ ಮಾಡಿದ್ದರು. ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಕ್ಷೇತ್ರದ ಜನರಿಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.
    ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ 25 ಸಾವಿರ ಕೋಟಿ ರೂ.ಸಾಲ ಮನ್ನಾ ಮಾಡಿದ್ದರು. ಹಾಗಾಗಿ ಜೆಡಿಎಸ್ ಬೆಂಬಲಿಸಿ ಸಿ.ಎಸ್.ಪುಟ್ಟರಾಜು ಅವರನ್ನು ಮತ್ತೊಮ್ಮೆ ವಿಧಾನಸಭೆಗೆ ಕಳುಹಿಸಿಕೊಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
    ಅರಳಕುಪ್ಪೆ, ಸೀತಾಪುರ ಹಾಗೂ ಜಾಗಟೆಮಲ್ಲೆನಹಳ್ಳಿ ಗ್ರಾಮದ ಜೆಡಿಎಸ್ ಮುಖಂಡರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts