More

    ಕೋಲಾರ ಲೋಕಸಭೆ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಆಯ್ಕೆಗೆ ಸಭೆ

    ಬೆಂಗಳೂರು: ಲೋಕಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಕೋಲಾರ ಕ್ಷೇತ್ರದ ಮುಖಂಡರ ಜತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಮಾಲೋಚನೆ ನಡೆಸಿದರು.

    ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದು, ಕೋಲಾರ ಕ್ಷೇತ್ರ ಬಿಟ್ಟುಕೊಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಭೆ ನಡೆಸಿ ಚರ್ಚಿಸಿದರು.

    ಮೂವರು ಸಂಭವನೀಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಿದರು. ನೀವು ಯಾರೇ ಅಭ್ಯರ್ಥಿಯನ್ನು ಘೋಷಣೆ ಮಾಡಿದರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಮುಖಂಡರು ಕುಮಾರಸ್ವಾಮಿಗೆ ಭರವಸೆ ನೀಡಿದರು.

    ರಾಜ್ಯ ಮತ್ತು ಸ್ಥಳೀಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡೆ ಅಭ್ಯರ್ಥಿ ಘೋಷಣೆ ಮಾಡುವುದಾಗಿ ಕುಮಾರಸ್ವಾಮಿ ಸಭೆಯ ಗಮನಕ್ಕೆ ತಂದರು.

    ಗೆಲ್ಲುವ ಸಾಧ್ಯತೆಗಳು, ಪಕ್ಷ ಸಂಘಟನೆ, ಒಮ್ಮತದ ಅಭ್ಯರ್ಥಿ ಆಯ್ಕೆ, ಮೈತ್ರಿ ಧರ್ಮ ಪಾಲನೆ, ಬಿಜೆಪಿ ನಾಯಕರ ಜತೆ ಸಮನ್ವಯ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಯಿತು.

    ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿಧಾನಸಭೆಯ ಮಾಜಿ ಡೆಪ್ಯೂಟಿ ಸ್ಪೀಕರ್ ಕೆ.ಎಂ. ಕೃಷ್ಣಾರೆಡ್ಡಿ, ಶಾಸಕರಾದ ವೆಂಕಟಶಿವಾ ರೆಡ್ಡಿ, ಸಮೃದ್ಧಿ ಮಂಜುನಾಥ್, ಮೇಲೂರು ರವಿ, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ರಾಜ್ಯ ಮಹಿಳಾ ಜನತಾದಳ ಅಧ್ಯಕ್ಷೆ ರಶ್ಮಿ ರಾಮೇಗೌಡ, ಬಂಗಾರಪೇಟೆ ಮಲ್ಲೇಶ್, ಸಿಎಂಆರ್ ಶ್ರೀನಾಥ್, ವಕ್ಕಲೇರಿ ರಾಮು, ವಡಗೂರು ಹರೀಶ್, ರಮೇಶ್ ಬಾಬು, ಎನ್.ನಟರಾಜು ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts