ಬಿಜೆಪಿ-ಜೆಡಿಎಸ್​ ಮೈತ್ರಿಗೆ ಮೊದಲ ಜಯ; ಕೋಲಾರದಲ್ಲಿ ಮಲ್ಲೇಶ್​ ಬಾಬುಗೆ ಭರ್ಜರಿ ಗೆಲುವು

Mallesh Babu
Published on

ಕೋಲಾರ: 18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾದ ಮಲ್ಲೇಶ್​ ಬಾಬು ಭರ್ಜರಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಕೆ.ವಿ. ಗೌತಮ್​ ವಿರುದ್ಧ 67,923 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್​ ಅಭ್ಯರ್ಥಿಯಾಗಿ ಕೋಲಾರದಿಂದ ಕಣಕ್ಕಿಳಿದಿದ್ದ ಮಲ್ಲೇಶ್​ ಬಾಬು 6,77,568 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಗೌತಮ್​ 6,12,795 ಮತಗಳನ್ನು ಪಡೆಯಲಷ್ಟೇ ಶಕ್ತರಾದರು. ಈ ಮೂಲಕ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಮೊದಲ ಗೆಲುವು ಸಿಕ್ಕಂತಾಗಿದೆ.

ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು ಹಿನ್ನಲೆಯಲ್ಲಿ ಮತ ಎಣಿಕಾ ಕೇಂದ್ರದ ಹೊರಗೆ ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.  ಪಟಾಕಿ ಸಿಡಿಸಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪರವಾಗಿ ಘೋಷಣೆ ಕೂಗಿ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net