ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಮೋದಿ’ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಮಾದರಿಯಲ್ಲೇ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ‘ಗೌಡ’ರ ವಿರುದ್ಧ ಮಾತನಾಡಿದ್ದು, ವಿವಾದಾತ್ಮಕವಾಗಿ ಪರಿಣಮಿಸಿದೆ. ಮಾತ್ರವಲ್ಲ, ಪ್ರಶಾಂತ್ ಸಂಬರಗಿ ವಿರುದ್ಧ ದೂರು ಕೂಡ ನೀಡಲಾಗಿದೆ.
ನೀರವ್ ಮೋದಿ, ಲಲಿತ್ ಮೋದಿ ಅವರ ವಿರುದ್ಧ ಮಾತನಾಡುತ್ತ, ಅವರನ್ನು ಪ್ರಧಾನಿ ಮೋದಿ ಅವರಿಗೆ ಹೋಲಿಸಿ, ಮೋದಿ ಎನ್ನುವ ಹೆಸರಿರುವವ ಎಲ್ಲರೂ ಹೀಗೆ ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ರಾಹುಲ್ ಗಾಂಧಿ ವಿರುದ್ಧ, ಸೂರತ್ ಶಾಸಕ ಹಾಗೂ ಮಾಜಿ ಸಚಿವ ಪೂರ್ಣೇಶ್ ಮೋದಿ ಕೇಸು ದಾಖಲಿಸಿದ್ದು, ಈ ಪ್ರಕರಣದಲ್ಲಿ ಅಲ್ಲಿನ ನ್ಯಾಯಾಲಯ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇದೇ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಪ್ರಶಾಂತ್ ನಿಂಬರಗಿ, ದೇವೇಗೌಡರ ವಿರುದ್ಧ ಅದರಲ್ಲೂ ಗೌಡ ಸಮುದಾಯಕ್ಕೆ ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಇದನ್ನು ಖಂಡಿಸಿರುವ ಜೆಡಿಎಸ್ ಕಾನೂನು ಘಟಕದ ಎ.ಪಿ.ರಂಗನಾಥ್, ವಕ್ತಾರ ಗಂಗಾಧರ್ ಮೂರ್ತಿ ಮುಂತಾದವರು ಸಂಬರಗಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಸಿದ್ದಾರೆ.

ಪ್ಯಾನ್-ಆಧಾರ್ ಲಿಂಕ್, ಮಾ. 31 ಕಡೇ ದಿನ: ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಹೇಗೆ?
ಪೊಲೀಸರಿಂದಲೇ ಅಪಹರಣ, ಹಣಕ್ಕೆ ಬೇಡಿಕೆ?; ತಲೆಮರೆಸಿಕೊಂಡಿರುವ ಸಬ್ ಇನ್ಸ್ಪೆಕ್ಟರ್!