ಕರಿಯ ಕುಮಾರಸ್ವಾಮಿ ಎಂದು ಅವಹೇಳನ ಮಾಡಿದ್ದ ಶಾಸಕ ಜಮೀರ್ ವಿರುದ್ಧ ಜೆಡಿಎಸ್ ದೂರು

jds
Published on

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಝಡ್.ಜಮೀರ್ ಅಹಮದ್ ಖಾನ್ ವಿರುದ್ಧ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಜೆಡಿಎಸ್ ದೂರು ನೀಡಿದೆ.

ಜೆಡಿಎಸ್‌ನ ಬೆಂಗಳೂರು ಮಹಾನಗರ ಯುವ ಘಟಕ ಅಧ್ಯಕ್ಷ ಎ.ಎಂ. ಪ್ರವೀಣ್ ಕುಮಾರ್, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಮಲ್ ಪಂತ್‌ರನ್ನು ಭೇಟಿ ಮಾಡಿ ದೂರು ನೀಡಿದರು. ಮಾರ್ಚ್ 30ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಕುಮಾರಸ್ವಾಮಿ ಅವರನ್ನು ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿರುತ್ತಾರೆ. ಈ ರೀತಿಯ ಅವಹೇಳನಕಾರಿ ಹೇಳಿಕೆ ನೀಡಿರುವ ಜಮೀರ್ ಅಹಮದ್ ಖಾನ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net