More

    ‘ಸೊಕ್ಕು’ ಸಿದ್ದರಾಮಯ್ಯ ಪೇಟೆಂಟ್ : ಸಿಎಂ ವಿರುದ್ಧ ಜೆಡಿಎಸ್ ಕಿಡಿ

    ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಎಚ್​.ಡಿ. ದೇವೇಗೌಡರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಟೀಕೆಗೆ ಸರಣಿ ಟ್ವಿಟ್ ಮಾಡುವ ಮೂಲಕ ಜೆಡಿಎಸ್ ತೀವ್ರ ಆಕ್ರೋಶ ಹೊರ ಹಾಕಿದೆ.

    ಇದನ್ನೂ ಓದಿ: ಸುಮಧುರ ಕಂಠದ ಹುಡುಗಿಯಿಂದ ಫೋನ್ ಕರೆ ಬಂದಿದೆಯೇ?ನಂಬಿದರೆ ಅಷ್ಟೆ..

    ಸಿದ್ದರಾಮಯ್ಯನವರೇ ನಿಮಗೆ ಏಣಿ, ಹೆಗಲಾಗಿದ್ದ ಗೌಡರ ಬೆನ್ನಿಗಿರಿದ ‘ಅಪರ ಬ್ರೂಟಸ್’ ನೀವು. ಜೆಡಿಎಸ್ ಗೆ ಗತಿ ಕಾಣಿಸುತ್ತೇನೆಂದು ನೀವು ಆಡುತ್ತಿರುವ ‘ಸಿದ್ದಾರಮೆ ಆಟ’ ಯಾರಿಗೆ ತಾನೇ ಗೊತ್ತಿಲ್ಲ? ಕರ್ನಾಟಕದ ಸೊಕ್ಕಿನ ಮನುಷ್ಯ ಎಂದು ಜೆಡಿಎಸ್ ನ ಅಧಿಕೃತ ‘ಎಕ್ಸ್’​ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದೆ.

    ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ ಎಂದು ದೇವೇಗೌಡರು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ದೇಶವನ್ನು ಜಾತಿ, ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇ ಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಟ್ಯಾಗ್ ಮಾಡಿ ಟಾಂಗ್ ಕೊಟ್ಟಿದೆ.

    ತುಘಲಕ್ ಮನಃಸ್ಥಿತಿ: ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ? ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

    ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ,ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋದರೆ ನೀವೇ ಬೆತ್ತಲೆಯಾಗುತ್ತೀರಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ. ನಿಮ್ಮಂಥ ಆತ್ಮಸಾಕ್ಷಿಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ. ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಜೆಡಿಎಸ್ ಅಂತ್ಯ ನಿಮ್ಮ ಕನಸು ಅಷ್ಟೇ.

    ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣ(!?)ವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ಧರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ ಎಂದು ವಾಗ್ದಾಳಿ ನಡೆಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts