More

    ಜೆಡಿಎಸ್ ಕೋರ್ ಕಮಿಟಿ ಸಭೆ ಇಂದು

    ಬೆಂಗಳೂರು: ರಾಜ್ಯಸಭೆ, ಲೋಕಸಭೆ ಚುನಾವಣೆ ಸಿದ್ಧತೆ, ಪಕ್ಷದ ಪದಾಧಿಕಾರಿಗಳ ನೇಮಕ, ವಿಧಾನ ಮಂಡಲದ ಅಧಿವೇಶನ ಸೇರಿದಂತೆ ಹಲವು ವಿಚಾರಗಳನ್ನು ಕುರಿತು ಚರ್ಚಿಸಲು ಸೋಮವಾರ ಜೆಡಿಎಸ್ ಕೋರ್ ಕಮಿಟಿ ಸಭೆ ಕರೆಯಲಾಗಿದೆ.

    ಜೆ.ಪಿ.ಭವನದಲ್ಲಿ ಬೆಳಗ್ಗೆ 11.30ಕ್ಕೆ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಜಿ. ಟಿ.ದೇವೇಗೌಡ ವಹಿಸಲಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಖಾಲಿ ಇರುವ ಜಿಲ್ಲಾಧ್ಯಕ್ಷರ ನೇಮಕ, ರಾಜ್ಯ ಪದಾಧಿಕಾರಿಗಳ ನೇಮಕದ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

    ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ, ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಹಾಗೂ ಬೆಂಬಲಿಸುವ ಕುರಿತು ಚರ್ಚಿಸಲಾಗುತ್ತದೆ.

    ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಈಗಿನಿಂದಲೇ ಶ್ರಮ ವಹಿಸಿ ಕೆಲಸ ಮಾಡುವುದು, ವಿಧಾನ ಮಂಡಲದ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ಧ್ವನಿ ಎತ್ತುವ ಕುರಿತೂ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts