17.8 C
Bengaluru
Wednesday, January 22, 2020

ರಾಮನಗರ, ಮಂಡ್ಯ ಜೆಡಿಎಸ್​ಗೆ, ಮೂರು ಕಾಂಗ್ರೆಸ್​ಗೆ; ಜಂಟಿ ಪ್ರಚಾರದ ಮೂಲಕ ದೇಶಕ್ಕೆ ಸಂದೇಶ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಯಾವ ಕ್ಷೇತ್ರವನ್ನು ಯಾವ ಪಕ್ಷ ಹಂಚಿಕೊಳ್ಳಬೇಕು ಎಂಬುದರ ಕುರಿತಾಗಿ ಮೈತ್ರಿ ಪಕ್ಷಗಳಾದ ಕಾಂಗ್ರೆಸ್​ ಮತ್ತು ಜೆಡಿಎಸ್​ ನಡುವೆ ಉಂಟಾಗಿದ್ದ ಗೊಂದಲ ಕೊನೆಗೂ ಬಗೆಹರಿದಿದೆ. ಅದರಂತೆ ರಾಮನಗರ ಮತ್ತು ಮಂಡ್ಯ ಕ್ಷೇತ್ರಗಳು ಜೆಡಿಎಸ್​ಗೆ ಸಿಕ್ಕಿದ್ದು, ಶಿವಮೊಗ್ಗ, ಬಳ್ಳಾರಿ ಲೋಕಸಭೆ ಕ್ಷೇತ್ರ ಮತ್ತು ಜಮಖಂಡಿ ವಿಧಾನಸಭೆ ಕ್ಷೇತ್ರ ಕಾಂಗ್ರೆಸ್​ಗೆ ದಕ್ಕಿದೆ.

ಕ್ಷೇತ್ರಗಳ ಹಂಚಿಕೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಇಂದು ಕಾಂಗ್ರೆಸ್​ ಮತ್ತು ಜೆಡಿಎಸ್​ ಮುಖಂಡರು ನಗರದ ಕೆ.ಕೆ ಗೆಸ್ಟ್​ ಹೌಸ್​ನಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಜೆಡಿಎಸ್​ನಿಂದ ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್​ ಅಲಿ, ಕಾಂಗ್ರೆಸ್​ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ವೇಣುಗೋಪಾಲ್​, ಕೆಪಿಸಿಸಿ ಅಧ್ಯಕ್ಷ ದಿನೇಶ್​ಗುಂಡೂರಾವ್​ ಮತ್ತಿತರರು ಭಾಗವಹಿಸಿದ್ದರು.

ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಮಾಡಿಕೊಂಡಿವೆ. ಬಳ್ಳಾರಿ, ಶಿವಮೊಗ್ಗ ಲೋಕಸಭೆ ಕ್ಷೇತ್ರ ಮತ್ತು ಜಮಖಂಡಿ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ರಾಮನಗರ ವಿಧಾನಸಭೆ ಮತ್ತು ಮಂಡ್ಯ ಲೋಕಸಭೆ ಕ್ಷೇತ್ರದಿಂದ ಜೆಡಿಎಸ್​ ಸ್ಪರ್ಧೆ ಮಾಡಲಿದೆ. ಚುನಾವಣೆಯಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ನ ನಾಯಕರು ಒಟ್ಟಿಗೇ ಪ್ರಚಾರ ನಡೆಸಲಿದ್ದೇವೆ ಎಂದು ತಿಳಿಸಿದರು.

ಮುಂದಿನ ಲೋಕಸಭೆ ಚುನಾವಣೆಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ. ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ನಾವು ಒಂದೇ ವೇದಿಕೆಯಡಿ ಬಂದಿದ್ದೇವೆ. ಜಾತ್ಯತೀತ ಪಕ್ಷಗಳುಒಟ್ಟುಗೂಡಬೇಕು ಎಂಬ ಸಂದೇಶವನ್ನು ರಾಷ್ಟ್ರಕ್ಕೆ ರವಾನಿಸಲು ಕರ್ನಾಟಕದಲ್ಲಿ ಮಾದರಿ ಮೈತ್ರಿ ಮಾಡಿಕೊಂಡಿದ್ದೇವೆ. ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.

ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಮಗೆ ಸಿಕ್ಕಿರುವ ಸ್ಥಾನಗಳ ಬಗ್ಗೆ ನಮ್ಮ ಪಕ್ಷದೊಳಗೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ಜೆಡಿಎಸ್​ನವರು ಅವರ ಅಭ್ಯರ್ಥಿಗಳನ್ನು ನಿರ್ಧರಿಸುತ್ತಾರೆ ಎಂದು ತಿಳಿಸಿದರು.

ಮುಂದಿನ ಲೋಕಸಭೆ ಚುನಾವಣೆಗೆ ಸ್ಥಾನಗಳು ಹಂಚಿಕೆಯಾಗಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದಷ್ಟೇ ಹೇಳಿದರು.

ಮಂಡ್ಯದಲ್ಲಿ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಹಾಕಬೇಕು ಎಂಬ ಮಾಜಿ ಸಚಿವ ಚೆಲುವರಾಯಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ” ಅದು ಅವರ ವೈಯಕ್ತಿ ಅಭಿಪ್ರಾಯ ಮಾತ್ರ,” ಎಂದು ತಿಳಿಸಿದರು. ಅಲ್ಲದೆ, ಸಮಸ್ಯಾತ್ಮಕವಾಗಿದ್ದ ರಾಮನಗರ ಮತ್ತು ಮಂಡ್ಯ ಕ್ಷೇತ್ರದ ಕಾರ್ಯಕರ್ತರ ಮತ್ತು ಮುಖಂಡರ ಜತೆ ಚರ್ಚಿಸಿಯೇ ಮೈತ್ರಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...