More

  ಎನ್​ಡಿಎ ಮೈತ್ರಿಕೂಟ ಸೇರಿಕೊಂಡ ಜೆಡಿಎಸ್​; ಬಿಜೆಪಿ ಜತೆ ಕೈಜೋಡಿಸಿದ ಎಚ್​.ಡಿ.ಕುಮಾರಸ್ವಾಮಿ

  ನವದೆಹಲಿ: ಬಿಜೆಪಿ ಜತೆ ಜೆಡಿಎಸ್​ ಸೇರಿಕೊಳ್ಳಲಿದೆ ಎಂದು ಕೆಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಗೆ ಇಂದು ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ. ಇಂದು ದೆಹಲಿಯಲ್ಲಿ ಬಿಜೆಪಿಯ ವರಿಷ್ಠರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ, ತಮ್ಮ ನಿಲುವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.

  ಇದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಉಭಯಪಕ್ಷಗಳ ಮೈತ್ರಿ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಎಚ್​ಡಿಕೆ ಪುತ್ರ ನಿಖಿಲ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

  ಎನ್​ಡಿಎ ಮೈತ್ರಿಕೂಟ ಸೇರಿಕೊಂಡ ಜೆಡಿಎಸ್​; ಬಿಜೆಪಿ ಜತೆ ಕೈಜೋಡಿಸಿದ ಎಚ್​.ಡಿ.ಕುಮಾರಸ್ವಾಮಿ

  ಇಂದು ಎಚ್​.ಡಿ.ಕುಮಾರಸ್ವಾಮಿ ಅವರನ್ನು ನಾನು ಹಾಗೂ ಅಮಿತ್ ಷಾ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಎನ್​ಡಿಎ ಮೈತ್ರಿಕೂಟದ ಭಾಗವಾಗಿರಲು ಜೆಡಿಎಸ್​ ನಿರ್ಧರಿಸಿರುವುದು ನಮಗೆ ಸಂತೋಷದ ವಿಷಯವಾಗಿದೆ. ಇದು ಎನ್​ಡಿಎ ಹಾಗೂ ಪ್ರಧಾನಿ ಮೋದಿ ಅವರ ದೂರದೃಷ್ಟಿಯನ್ನು ಬಲಗೊಳಿಸಲು ನೆರವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ತಿಳಿಸಿದ್ದಾರೆ.

  ಸಿದ್ದರಾಮಯ್ಯಗೆ ಅಡುಗೆ ಮಾಡಲು ಬರುತ್ತಾ? ಹೆಂಡ್ತಿ ಹತ್ರ ಸಿಎಂ ಯಾವತ್ತಾದ್ರೂ ಬೈಸಿಕೊಂಡಿದ್ರಾ?

  ಮೋದಿ ವಾಟ್ಸ್​ಆ್ಯಪ್​ ಚಾನೆಲ್​ಗೆ ಒಂದೇ ದಿನದಲ್ಲಿ 10 ಲಕ್ಷಕ್ಕೂ ಅಧಿಕ ಫಾಲೋವರ್ಸ್; ಸಿಎಂಗಳ ಪೈಕಿ ಸಿದ್ದರಾಮಯ್ಯ ಮೊದಲಿಗರು!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts