More

    ಜೆಡಿಎಸ್ ಅಸ್ತಿತ್ವ ಮರೆಮಾಚಲು ಎರಡೂ ರಾಷ್ಟ್ರೀಯ ಪಕ್ಷಗಳ ತಂತ್ರ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕೆ

    ಬೆಂಗಳೂರು: ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬಂದ ನಂತರ ಎರಡೂ ರಾಷ್ಟ್ರೀಯ ಪಕ್ಷಗಳು ಏನೆಲ್ಲ ತಂತ್ರಗಳನ್ನು ಹೆಣೆಯುತ್ತಿವೆ ಗೊತ್ತಿದೆ. ಬೇಕೆಂತಲೇ ಜೆಡಿಎಸ್ ಅಸ್ತಿತ್ವ ಮರೆಮಾಚುತ್ತಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

    ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್, ಬಿಜೆಪಿ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳ ಆಂತರಿಕ ಸಮೀಕ್ಷೆ ಪ್ರಕಾರ ಜೆಡಿಎಸ್ 50 ಸ್ಥಾನಗಳನ್ನು ಗೆಲ್ಲಲಿದೆ. ಆದರೆ ಪಂಚರತ್ನ ರಥಯಾತ್ರೆಗೆ ಜನರು ಅಭೂತಪೂರ್ವವಾಗಿ ಸ್ಪಂದಿಸುತ್ತಿದ್ದು, 123 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬರುವುದು ನಿಶ್ಚಿತವೆಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

    ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿ ಜೆಡಿಎಸ್ 123 ಕ್ಷೇತ್ರಗಳಲ್ಲಿ ಜಯಸಾಧಿಸಲಿದೆ. ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ವಿಧಾನಸೌಧ ಮೆಟ್ಟಿಲು ಮೇಲೆ ಪ್ರಮಾಣವಚನ ಸ್ವೀಕರಿಸಬೇಕು ಎಂಬುದು ತಮ್ಮ ಕನಸು ಎಂದರು.

    ಮಾಜಿ ಉಪಮಹಾಪೌರ ಶ್ರೀರಾಮೇಗೌಡ, ಚಾಮರಾಜಪೇಟೆ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಗೋವಿಂದರಾಜು ಸೇರಿ ಕಾಂಗ್ರೆಸ್, ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು ಜೆಡಿಎಸ್​ಗೆ ಸೇರ್ಪಡೆಯಾದರು.

    ಇನ್ನೇನು ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ನಡದೇ ಹೋಯ್ತು ದುರಂತ: ವಧುವಿನ ನಡೆ ನಿಗೂಢ!

    https://www.vijayavani.net/bengaluru-police-bengaluru-money-extortion-hoysala-police-manyata-tech-park-police-suspend-bengaluru-couple/

    ಜಿಮ್ ಹೋಗುವ ಮಧ್ಯ ವಯಸ್ಕರಲ್ಲಿ ಹೆಚ್ಚಿದ ಹೃದಯಾಘಾತ; ಬಚಾವಾಗಲು ಇಲ್ಲಿದೆ ಉಪಾಯ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts