More

    ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಎಚ್​.ಡಿ.ಕುಮಾರಸ್ವಾಮಿ

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಶನಿವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್​ಲೈನ್​ ವೇದಿಕೆಯಲ್ಲಿ ಮಹತ್ವದ ಸಲಹೆಗಳನ್ನು ನೀಡಿದರು.

    ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಜೆಪಿ ನಗರದ ತಮ್ಮ ನಿವಾಸದಿಂದಲೇ ಸಭೆ ನಡೆಸಿದ ಅವರು, ಕೆಲ ಅಭ್ಯರ್ಥಿಗಳಿಗೆ ಚಾಟಿ ಬೀಸಿದರು. ಅಲ್ಲದೆ, ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು ಹಾಗೂ ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

    ಇದನ್ನೂ ಓದಿ: ವಸತಿ ಶಾಲೆಗಳಿಗೆ ಸ್ವಂತ ಕಟ್ಟಡಕ್ಕೆ ಆದ್ಯತೆ: ಶಾಸಕ ಪರಣ್ಣ ಮುನವಳ್ಳಿ

    ಪಕ್ಷದ ಕಚೇರಿಯಿಂದ ಬರುವ ಸೂಚನೆಗಳನ್ನು ಪಾಲಿಸಲು ಸೂಚನೆ ನೀಡಿದ ಮಾಜಿ ಮುಖ್ಯಮಂತ್ರಿಗಳು, ಮತದಾನಕ್ಕೆ ಇನ್ನೂ 37 ದಿನ ಇದೇ, ಇದು ನಿಮಗೆಲ್ಲ ಅಗ್ನಿಪರೀಕ್ಷೆ. ಕ್ಷೇತ್ರದಲ್ಲಿ ಏನಾದರೂ ಸಮಸ್ಯೆ ಇದ್ದರೆ ಬಗೆಹರಿಸಿಕೊಳ್ಳಿ. ಕಾರ್ಯಕರ್ತರು, ಮುಖಂಡರನ್ನು ಒಟ್ಟಿಗೆ ಕರೆದುಕೊಂಡು ಹೋಗಿ ಎಂದು ಅಭ್ಯರ್ಥಿಗಳಿಗೆ ತಿಳಿಸಿದರು.

    ಪಂಚರತ್ನ ರಥಯಾತ್ರೆ ಯಶಸ್ವಿ ಆಗಿದೆ. ಮೈಸೂರಿನಲ್ಲಿ ಸಮಾರೋಪ ಸಮಾವೇಶ ಯಶಸ್ವಿ ಆಗಿದೆ. ಪಂಚರತ್ನ ಯೋಜನೆಗಳನ್ನು ಮನೆ ಮನೆಗೂ ತೆಗೆದುಕೊಂಡು ಹೋಗಿ. ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡಿ ಎಂದು ಅಭ್ಯರ್ಥಿಗಳಿಗೆ ಸೂಚಿಸಿದರು.

    ಇದೇ ವೇಳೆ ಅಭ್ಯರ್ಥಿಗಳ ಪ್ರಶ್ನೆಗಳಿಗೆ ಕುಮಾರಸ್ವಾಮಿ ಅವರು ಉತ್ತರ ನೀಡಿದರು.

    ಐಪಿಎಲ್​ ಆಡಲು ಪಾಕ್​ಗೆ ಅವಕಾಶ ನೀಡದಿದ್ರೆ… ಭಾರತಕ್ಕೆ ಇಮ್ರಾನ್​ ಖಾನ್ ಹೇಳಿದ್ದಿಷ್ಟು…

    ಲೈಂಗಿಕ ದೌರ್ಜನ್ಯ ಪ್ರಕರಣ; ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts