More

    ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ;ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ

    ಬೆಂಗಳೂರು:
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಹಾಗೂ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಸಿ.ಕೆ.ನಾನು ಅವರನ್ನು ಉಚ್ಛಾಟಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ತಿಳಿಸಿದರು.
    ಜೆ.ಪಿ. ಭವನದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಈ ವಿಷಯ ಪ್ರಕಟಿಸಿದರು.
    ಪಕ್ಷದ ಹಿತಕ್ಕಾಗಿ ಅವರ ಸಮ್ಮುಖದಲ್ಲಿಯೇ ಕೈಗೊಂಡ ನಿರ್ಧಾರವನ್ನು ಅವರು ವಿರೋಧಿಸಿ, ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಅಪಪ್ರಚಾರ ನಡೆಸಿದರು. ಇದರಿಂದ ಪಕ್ಷದ ವರ್ಚಸ್ಸು, ಹಿತಕ್ಕೆ ಧಕ್ಕೆ ಆಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಕರೆದು ಉಚ್ಛಾಟನೆಯ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
    ಮಂಡ್ಯ ಜಿಲ್ಲೆಯ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಅವರು, ಇಬ್ರಾಹಿಂ ಅವರನ್ನು ಹಾಗೂ ಪಶ್ಚಿಮ ಬಂಗಾಳ ಜೆಡಿಎಸ್ ಘಟಕದ ಅಧ್ಯಕ್ಷ ಪುನೀತ್ ಕುಮಾರ ಸಿಂಗ್ ಅವರು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕೇರಳದ ಸಿ.ಕೆ.ನಾನು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ನಿರ್ಣಯವನ್ನು ಕಾರ್ಯಕಾರಿಣಿ ಸಭೆಯಲ್ಲಿ ಮಂಡನೆ ಮಾಡಿದ್ದರು.
    ಈ ಇಬ್ಬರು ಮಂಡಿಸಿದ ನಿರ್ಣಯಗಳನ್ನು ಕಾರ್ಯಕಾರಿಣಿಯೂ ಸರ್ವಾನುಮತದಿಂದ ಅಂಗೀಕಾರ ಮಾಡಿತು.

    ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರ ಹಾಜರಿ:
    ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಜತೆಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎಲ್ಲ ರಾಜ್ಯಗಳ ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಿದ್ದರು.
    ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ಶಿವಕುಮಾರ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಪ್ರುಲ್ಲಾ ಖಾನ್, ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ಪುನೀತ್ ಕುಮಾರ ಸಿಂಗ್, ಹರಿಯಾಣ ರಾಜ್ಯಾಧ್ಯಕ್ಷ ಜೋರಾ ಸಿಂಗ್, ಪಂಜಾಬ್ ರಾಜ್ಯಾಧ್ಯಕ್ಷ ಅವತಾರ್ ಸಿಂಗ್, ಜಮ್ಮು ಮತ್ತು ಕಾಶ್ಮೀರದ ರಾಜ್ಯಾಧ್ಯಕ್ಷ ರಾಮ್ ರತನ್ ಶರ್ಮ, ಉತ್ತರಾಖಂಡ್ ರಾಜ್ಯಾಧ್ಯಕ್ಷ ಹರ್ ಜಿತ್ ಸಿಂಗ್, ಸುರೇಶ್ ದಾಸ್, ಮಹಾರಾಷ್ಟ್ರ ರಾಜ್ಯಾಧ್ಯಕ್ಷ ನರೇಂದ್ರ ಸಿಂಗ್ ಹರಿದಾಸ್ ಕಂತಾರಿಯಾ, ಗುಜರಾತ್ ರಾಜ್ಯಾಧ್ಯಕ್ಷ ಶಾ ಗಣಪತಿ ಭಾಯ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts