More

    ಜೆಡಿಎಸ್ ನಡೆಗೆ ಬೇಸರವಾಗುತ್ತಿದೆ; ಡಿಕೆಶಿ ವ್ಯಂಗ್ಯ

    ಬೆಂಗಳೂರು: ಜಾತ್ಯತೀತ ಜನತಾದಳ ನಾಯಕರ ಕಾಲೆಳೆಯುವ ಕೆಲಸವನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಂದುವರಿಸಿದ್ದು, ದೇಶದ ಪ್ರಧಾನಿಯಾದವರು, ಎರಡು ಬಾರಿ ಮುಖ್ಯಮಂತ್ರಿಯಾದವರು ಇರುವ ಪಕ್ಷವನ್ನು ವಿಲೀನ ಮಾಡುತ್ತಿರುವುದನ್ನು ನೋಡಿ ಬೇಸರವಾಗುತ್ತಿದೆ ಎಂದು ಲೇವಡಿ ಮಾಡಿದ್ದಾರೆ.
    ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು, ಯಾರಾದರೂ ತಮ್ಮದೇ ಪಕ್ಷ ಇಟ್ಟುಕೊಂಡು ತಮ್ಮ ಕುಟುಂಬದವರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸುತ್ತಾರಾ? ಆ ಪಕ್ಷ ಇರಬೇಕು, ಪ್ರಬಲ ವಿರೋಧ ಪಕ್ಷವಾಗಬೇಕು ಎಂಬುದು ನಮ್ಮ ಆಸೆ. ಆದರೆ ಅವರೇ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಿಕೊಳ್ಳುತ್ತಿದ್ದಾರೆ. ಜೆಡಿಎಸ್ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರು ಎಂದರು.
    ಐಟಿ ಇಲಾಖೆ ನೋಟೀಸ್ ಬಗ್ಗೆ ದೇವೇಗೌಡರ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ, 1823 ಕೋಟಿ ಕಟ್ಟಬೇಕು ಎಂದು ದೇಶದ ಐಟಿ ಇಲಾಖೆ ಎಐಸಿಸಿಗೆ ನೋಟೀಸ್ ನೀಡಿದೆ. ವಿರೋಧ ಪಕ್ಷಗಳ ಮೇಲೆ ಈ ರೀತಿ ದಾಳಿ ಮಾಡಲಾಗುತ್ತಿದೆ. ದೇವೇಗೌಡರು ಐಟಿ ಅಧಿಕಾರಿಯೇ? ಅವರು ಆರೋಪ ಮಾಡಬೇಕು, ಅದಕ್ಕಾಗಿ ಮಾಡಿದ್ದಾರೆ. ನಾವು ಕೂಡ ಅವರ ಮೇಲೆ ಆರೋಪ ಮಾಡಬಹುದು. ಅವರ ಆರೋಪ ನಿರಾಧಾರ. ನಾವು ಯಾರಿಗೂ ದುಡ್ಡು ಕಟ್ಟುವ ಅಗತ್ಯವಿಲ್ಲ ಎಂದರು.
    ನಮ್ಮ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡು ಅದರಲ್ಲಿದ್ದ ಹಣವನ್ನು ಕದ್ದಿದ್ದಾರೆ. ನಮ್ಮ ಪಕ್ಷ ರಾಜ್ಯದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ ಎಂಬುದು ಅವರಿಗೆ ಅರಿವಾಗಿದೆ. ಹೀಗಾಗಿ ಅಸೂಯೆಯಿಂದ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕುಟುಕಿದರು.
    ಬಿಜೆಪಿ ಅಸಮಾಧಾನಿತ ನಾಯಕ ಕರಡಿ ಸಂಗಣ್ಣ ನಿಮ್ಮನ್ನು ಹಾಗೂ ಮುಖ್ಯಮಂತ್ರಿಗಳನ್ನು ಸಂಪರ್ಕ ಮಾಡಿದ್ದಾರೆಯೇ ಎಂದು ಕೇಳಿದಾಗ, ನಮ್ಮನ್ನು ಅನೇಕ ನಾಯಕರು ಸಂಪರ್ಕ ಮಾಡಿದ್ದಾರೆ. ಅವರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ. ನಮ್ಮ ಪಕ್ಷಕ್ಕೆ ಸೇರಲು ಬಯಸಿ ಬಿಜೆಪಿ ಹಾಗೂ ಜೆಡಿಎಸ್‌ನ ಪ್ರಮುಖ ನಾಯಕರು ಮುಂದಾಗಿದ್ದಾರೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts