ಸೂಪರ್​ ಸಿಎಂ ರೇವಣ್ಣ ವಿರುದ್ಧ ಜೆಡಿಎಸ್​ನಲ್ಲೇ ಅತೃಪ್ತಿ?

ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್​.ಡಿ. ರೇವಣ್ಣ ವಿರುದ್ಧ ಜೆಡಿಎಸ್ ಮುಖಂಡರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನ ಪರಿಷತ್​ ನಾಮ ನಿರ್ದೇಶನಕದಲ್ಲಿ ನಿಷ್ಠಾವಂತರನ್ನು ಕಡೆಗಣಿಸಲಾಗಿದೆ. ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರ ಕುಟುಂಬದ ನಿಷ್ಠರನ್ನು ಮಾತ್ರ ಪರಿಷತ್​ ಮತ್ತು ಇತರೆ ಹುದ್ದೆಗಳಿಗೆ ನೇಮಕ ಮಾಡಲಾಗುತ್ತಿದೆ. ಈ ಹಿಂದೆ ರಮೇಶ್​ ಗೌಡ ಅವರನ್ನು ಪರಿಷತ್​ಗೆ ನಾಮ ನಿರ್ದೇಶನ ಮಾಡಲಾಗಿತ್ತು. ಈಗ ತಿಪ್ಪೇಸ್ವಾಮಿ ಅವರನ್ನು ಪರಿಷತ್​ಗೆ ನಾಮ ನಿರ್ದೇಶನ ಮಾಡಲಾಗಿದೆ ಎಂದು ಕೆಲವು ಜೆಡಿಎಸ್​ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಜತೆಗೆ ಎಲ್ಲಾ ನೇಮಕಾತಿಗಳಲ್ಲೂ ಸಚಿವ ರೇವಣ್ಣ ಹಸ್ತಕ್ಷೇಪ ಮಾಡುತ್ತಾರೆ. ಅವರು ದೇವೇಗೌಡರ ಮೇಲೆ ಒತ್ತಡ ಹಾಕುತ್ತಿದ್ದಾರೆ. ರೇವಣ್ಣ ಒತ್ತಡಕ್ಕೆ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಮತ್ತು ದೇವೇಗೌಡರು ಮಣಿಯುತ್ತಿದ್ದಾರೆ. ಅಧಿಕಾರ ಹಂಚಿಕೆಯಲ್ಲಿ ನಿಷ್ಠಾವಂತರನ್ನು ಗುರುತಿಸುತ್ತಿಲ್ಲ ಎಂದು ಆಪ್ತ ವಲಯದಲ್ಲಿ ಜೆಡಿಎಸ್​ ಮುಖಂಡರು ಚರ್ಚಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *