More

    ಅಪ್ಪ-ಅಮ್ಮ ಕಳೆದುಕೊಂಡ ದರ್ಶನ್ ವಿರುದ್ಧ ಸ್ಪರ್ಧಿಸದೇ ಕಾಂಗ್ರೆಸ್​ ಬೆಂಬಲಿಸಲು ಜೆಡಿಎಸ್ ನಿರ್ಧಾರ ಸಾಧ್ಯತೆ

    ಮೈಸೂರು: ಕೇವಲ 28 ದಿನಗಳ ಅಂತರದಲ್ಲಿ ತಂದೆ ಆರ್​. ಧ್ರುವನಾರಾಯಣ ಮತ್ತು ತಾಯಿ ವೀಣಾ ಅವರನ್ನು ಕಳೆದುಕೊಂಡು ಮಕ್ಕಳಾದ ದರ್ಶನ್ ಮತ್ತು ಧೀರನ್ ಅನಾಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಕಾಂಗ್ರೆಸ್​ನಿಂದ ಸ್ಪರ್ಧಿಸಿರುವ ದರ್ಶನ್​ ಅವರಿಗೆ ನೈತಿಕ ಬೆಂಬಲ ನೀಡಲು ಜೆಡಿಎಸ್ ಮುಂದಾಗಿದೆ.

    ತಂದೆ ಧ್ರುವನಾರಾಯಣ ಬದುಕಿದ್ದರೆ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರು. ಆದರೆ, ಅವರ ಅಕಾಲಿಕ ಮರಣದಿಂದಾಗಿ ಅವರ ಪುತ್ರ ದರ್ಶನ್​ಗೆ ನಂಜನಗೂಡ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕಳೆದ 20 ದಿನಗಳಿಂದ ದರ್ಶನ್​ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ತಂದೆಯ ಸಾವಿನ ನೋವಲ್ಲೂ ಚುನಾವಣಾ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಇದೀಗ ಅವರ ತಾಯಿ ವೀಣಾ ಕೂಡ ಮೃತಪಟ್ಟಿರುವುದು ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.

    ಇದನ್ನೂ ಓದಿ: ಪಕ್ಕದ ಸೀಟಲ್ಲಿ ಕುಳಿತಿದ್ದ ಯುವತಿಗೆ ಗುಪ್ತಾಂಗ ಪ್ರದರ್ಶಿಸಿದ ಪ್ರಯಾಣಿಕ ಅರೆಸ್ಟ್​: KSRTC ಬಸ್​ನಲ್ಲಿ ಘಟನೆ

    ತಂದೆ-ತಾಯಿಯನ್ನು ಕಳೆದುಕೊಂಡಿರುವ ದರ್ಶನ್​ ಮತ್ತು ಧೀರನ್​ಗೆ ಹಿರಿಯ ನಾಯಕರು ಪಕ್ಷಾತೀತವಾಗಿ ಬೆನ್ನಿಗೆ ನಿಂತಿದ್ದಾರೆ. ನಂಜನಗೂಡಿನಲ್ಲಿ ಕಾಂಗ್ರೆಸ್​ಗೆ ಜೆಡಿಎಸ್​ ನೇರ ಬೆಂಬಲ ಕೊಡುವ ಸಾಧ್ಯತೆ ಇದೆ.

    ನಂಜನಗೂಡಿನಲ್ಲಿ ಜೆಡಿಎಸ್ ಸ್ಪರ್ಧೆ ಮಾಡಬೇಕೋ? ಬೇಡವೋ? ಎಂಬ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ‌. ಧ್ರುವನಾರಾಯಣ ಮಕ್ಕಳು ಅಪ್ಪ ಅಮ್ಮ ಇಬ್ಬರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಇಬ್ಬರು ಮಕ್ಕಳು ಲವ-ಕುಶ ರೀತಿ ಕಾಣುತ್ತಿದ್ದಾರೆ. ತಂದೆ ಕಳೆದುಕೊಂಡು ನೋವು ಇರುವಾಗಲೇ ತಾಯಿಯನ್ನು ಕಳೆದುಕೊಂಡಿದ್ದಾರೆ. ಇಂತಹ ದುಖದಲ್ಲಿರುವವರ ಎದರು ಸ್ಪರ್ಧೆ ಮಾಡುವುದಕ್ಕೆ ನಮಗೆ ಮನಸ್ಸು ಒಪ್ಪುತ್ತಿಲ್ಲ. ಹೀಗಾಗಿ ಸ್ಪರ್ಧೆ ಮಾಡಬೇಕಾ? ಬೇಡವಾ? ಎಂಬುದರ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ಮೈಸೂರಿನಲ್ಲಿ ಜಿ.ಟಿ ದೇವೇಗೌಡ ಹೇಳಿಕೆ ನೀಡಿದರು.

    ಅಂದಹಾಗೆ ದರ್ಶನ್​ ಅವರ ತಾಯಿ ವೀಣಾ ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವೀಣಾ ಕೊನೆಯುಸಿರೆಳೆದಿದ್ದಾರೆ. ಪತಿಯ ಅಕಾಲಿಕ ಸಾವಿನಿಂದ ವೀಣಾ ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಅದೇ ನೋವಿನಲ್ಲಿದ್ದ ವೀಣಾ ಅವರು ಇದೀಗ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 4 ಗಂಟೆಯ ನಂತರ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮಕ್ಕೆ ಪಾರ್ಥೀವ ಶರೀರ ರವಾನೆಯಾಗಲಿದ್ದು, ನಾಳೆ ಅಂತ್ಯಕ್ರಿಯೆ ನೆರವೇರಲಿದೆ.

    ಇದನ್ನೂ ಓದಿ: ನೋಟುಗಳ ಮೇಲೆ ವಿವಾಹಿತ ಮಹಿಳೆಯರ ಬಗ್ಗೆ ಅಸಹ್ಯ ಬರಹ: ನಿಗೂಢ ಪ್ರಕರಣ ಭೇದಿಸಿದ ಪೊಲೀಸರು

    ಕಾಂಗ್ರೆಸ್​ ಕಟ್ಟಾಳು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್​. ಧ್ರುವನಾರಾಯಣ (61) ಅವರು ತೀವ್ರ ಹೃದಯಾಘಾತದಿಂದ ಮೈಸೂರಿನ ಡಿಆರ್​ಎಂ ಆಸ್ಪತ್ರೆಯಲ್ಲಿ ಮಾ.11ರಂದು ವಿಧಿವಶರಾದರು. ಅವರು ಕಾಂಗ್ರೆಸ್​ ಪಕ್ಷದ ನಿಷ್ಠಾವಂತ ನಾಯಕರಾಗಿದ್ದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದಲ್ಲಿ ಗೆಲುವು ಸಾಧಿಸಿದ್ದರು. (ದಿಗ್ವಿಜಯ ನ್ಯೂಸ್​)

    ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ: ತಂದೆ ಬೆನ್ನಲ್ಲೇ ತಾಯಿಯನ್ನೂ ಕಳೆದುಕೊಂಡ ದರ್ಶನ್​

    ಬೆಂಗಳೂರು | ಚಾಕೊಲೇಟ್ ತಂದು ಕೊಟ್ಟಿಲ್ಲವೆಂದು ಬದುಕು ಅಂತ್ಯಗೊಳಿಸಿದ ವಿವಾಹಿತೆ!

    ಅಳಿಯನಿಗೆ ಕೈ ತಪ್ಪಿದ ಟಿಕೆಟ್‌; ಕಾಂಗ್ರೆಸ್​ಗೆ ಮಾವ ರಾಜೀನಾಮೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts