25.9 C
Bengaluru
Wednesday, January 22, 2020

ಜೆಡಿಎಸ್​​ಗೆ ಮೂರು ಕ್ಷೇತ್ರ ನಷ್ಟ ದಳಪತಿಗಳಿಗೆ ಸಂಕಷ್ಟ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಲಿಟ್ಮಸ್ ಟೆಸ್ಟ್​ನಲ್ಲಿ ಜೆಡಿಎಸ್ ‘ಶೂನ್ಯ ಸಂಪಾದನೆ’ ಮಾಡಿದೆ. 2018ರಂತೆಯೇ ಈ ಬಾರಿಯೂ ಜೆಡಿಎಸ್ ಕಿಂಗ್ ಮೇಕರ್ ಆಗುವ ನಿರೀಕ್ಷೆಯಲ್ಲಿತ್ತು. ಈ ನಿರೀಕ್ಷೆಗೆ ಮತದಾರ ಎಳ್ಳು ನೀರು ಬಿಟ್ಟಿದ್ದಾನೆ. ಗಳಿಕೆ ಮಾತಿರಲಿ, ಕಳೆದುಕೊಂಡು ಕೈ ಕೈ ಹಿಸುಕಿಕೊಳ್ಳುವ ಸ್ಥಿತಿ ಜೆಡಿಎಸ್ ಪಾಲಿಗೆ ಬಂದಿದೆ. ಬಿಗಿ ಹಿಡಿತದಲ್ಲಿದ್ದ, ಪಕ್ಷದ ಭದ್ರಕೋಟೆ ಎನ್ನಲಾಗಿದ್ದ ಹುಣಸೂರು, ಕೆ.ಆರ್.ಪೇಟೆ ಹಾಗೂ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಗಳನ್ನು ಕಳೆದುಕೊಂಡು ಕಂಗಾಲಾಗಿದೆ.

ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ನೆಲೆ ಕಳೆದುಕೊಂಡಿದೆ. ‘ಜೆಡಿಎಸ್ ನನ್ನನ್ನು ಚಪ್ಪಲಿ ಬಿಡುವ ಜಾಗದಲ್ಲಿ ಇಟ್ಟಿತ್ತು..’ ಎಂದು ಗಂಭೀರ ಆರೋಪ ಮಾಡಿ ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದ ನಾರಾಯಣಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಅಖಾಡಕ್ಕಿಳಿದಿದ್ದ ನಾರಾಯಣಗೌಡ, ಜೆಡಿಎಸ್​ನ ಬಿ.ಎಲ್.ದೇವರಾಜ್ ಅವರನ್ನು 9,728 ಅಂತರದಿಂದ ಪರಾಭವಗೊಳಿಸಿದ್ದಾರೆ. ಆ ಮೂಲಕ ಜೆಡಿಎಸ್ ಕೋಟೆಯಲ್ಲಿ ಮೊದಲ ಬಾರಿಗೆ ಕಮಲ ಬಾವುಟ ಹಾರಿಸುವಲ್ಲಿ ಯಶಸ್ವಿಯಾಗಿ ದಳಪತಿಗಳ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ.

ಹುಣಸೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿದ್ದ ಅಡಗೂರು ವಿಶ್ವನಾಥ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡು ಕಣಕ್ಕಿಳಿದಿದ್ದರು. ಕಾಂಗ್ರೆಸ್-ಜೆಡಿಎಸ್ ಮಿಲಾಪಿ ಕುಸ್ತಿಯ ಮೂಲಕ ಮೈತ್ರಿ ಸರ್ಕಾರ ಪತನದ ರೂವಾರಿ ಎನ್ನಲಾದ ವಿಶ್ವನಾಥ್​ರನ್ನು ಸೋಲಿಸಿವೆ. ಇಲ್ಲೂ ಜೆಡಿಎಸ್ ತನ್ನ ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಟ್ಟಿದೆ. ಇನ್ನು ಮಹಾಲಕ್ಷಿ್ಮ ಲೇಔಟ್​ನಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ. ಜೆಡಿಎಸ್​ನಿಂದ ಬಿಜೆಪಿಗೆ ಜಿಗಿದಿದ್ದ ಕೆ.ಗೋಪಾಲಯ್ಯರನ್ನು ಸೋಲಿಸಲು ಜೆಡಿಎಸ್ ನಡೆಸಿದ ಎಲ್ಲ ಪಟ್ಟುಗಳೂ ವಿಫಲವಾಗಿವೆ.

ಕುಮಾರಸ್ವಾಮಿ, ದೇವೇಗೌಡ ತಂತ್ರಗಳಿಗೆ ಮತದಾರ ಮರುಳಾಗಿಲ್ಲ. ಬೆಂಗಳೂರಿನಲ್ಲಿ ಒಕ್ಕಲಿಗ ಮತದಾರರ ಸಂಖ್ಯೆ ಹೆಚ್ಚಿರುವ ಈ ಕ್ಷೇತ್ರದಲ್ಲೇ ಜೆಡಿಎಸ್ ನೆಲ ಕಚ್ಚಿದೆ. ಈ ಮೂರೂ ಕ್ಷೇತ್ರಗಳು ಕೈ ಕೊಟ್ಟರೂ ಯಶವಂತಪುರದಲ್ಲಿ ಎರಡು ಬಾರಿ ಸೋಲು ಕಂಡಿದ್ದ ಜವರಾಯಿಗೌಡ ಸೋಲು ಕೂಡ ಜೆಡಿಎಸ್​ಗೆ ಕೊಡಲಿ ಏಟು ನೀಡಿದೆ.

ಈಗಾಗಲೇ ಮಂಡ್ಯ ಲೋಕಸಭಾ ಕ್ಷೇತ್ರ ಕಳೆದುಕೊಂಡಿರುವ ಜೆಡಿಎಸ್ ಪಾಲಿಗೆ ಇದೀಗ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರವನ್ನೂ ಕಳೆದುಕೊಂಡಿರುವುದು ಗಾಯದ ಮೇಲೆ ಬರೆ ಎಳೆೆದಂತಾಗಿದೆ.

ಬಿಜೆಪಿ ಕಡೆಗೆ ಶಾಸಕರ ಚಿತ್ತ: ಜೆಡಿಎಸ್​ನ 8-10 ಶಾಸಕರು ಬಿಜೆಪಿಗೆ ಸೇರಲು ತುದಿಗಾಲ ಮೇಲೆ ನಿಂತಿರುವುದು ನುಂಗಲಾರದ ತುತ್ತಾಗಿದೆ. ಯಾವ ಭರವಸೆಯನ್ನು ನೀಡಿ ಶಾಸಕರನ್ನು ಉಳಿಸಿಕೊಳ್ಳಬೇಕು ಎಂಬ ಚಿಂತೆ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕಾಡತೊಡಗಿದೆ.

ಬಿಜೆಪಿ ವಿರುದ್ಧ ವಿನಾಕಾರಣ ಆರೋಪ, ಇಲ್ಲಸಲ್ಲದ ಹೇಳಿಕೆ ನೀಡಿದ ಸಿದ್ದರಾಮಯ್ಯಗೆ ಈ ಫಲಿತಾಂಶ ಆಘಾತ ನೀಡಿದೆ. ಇನ್ನು ಕೇಸರಿಪಡೆಯ ಸಂಘಟಿತ ಪ್ರಚಾರದ ಎದುರು ಕಾಂಗ್ರೆಸ್, ಜೆಡಿಎಸ್ ಹೇಳಹೆಸರಿಲ್ಲದಂತಾಗಿವೆ.

| ಬಿ.ಜಿ.ಪಾಟೀಲ್ ವಿಧಾನ ಪರಿಷತ್ ಸದಸ್ಯ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...