ಕುಮಾರಸ್ವಾಮಿ ಅವರು ಎರಡು ದೊಡ್ಡ ಸಂಸಾರ ನಡೆಸುತ್ತಿದ್ದಾರೆ ಎಂದ ಮಧು ಬಂಗಾರಪ್ಪ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ದೇವೇಗೌಡರ ತೀರ್ಮಾನಕ್ಕೆ ನಾನು ಬದ್ಧವಾಗಿರುತ್ತೇನೆ. ಶಿವಮೊಗ್ಗದಲ್ಲಿ ನಾನು ಸೋತಿದ್ದರೂ ಬಿಎಸ್​ವೈಗೆ ಫೈಟ್​ ಕೊಟ್ಟಿದ್ದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸಂಸದೀಯ ಕಾರ್ಯದರ್ಶಿ ಅಥವಾ ರಾಜಕೀಯ ಕಾರ್ಯದರ್ಶಿ ಸೇರಿ ಯಾವ ಹುದ್ದೆಯ ಆಕಾಂಕ್ಷಿಯೂ ಅಲ್ಲ. ಪಕ್ಷದಲ್ಲಿ ಯಾವುದೇ ಜವಾಬ್ದಾರಿಯನ್ನು ನೀಡಿದರು ನಾನು ವಹಿಸಿಕೊಳ್ಳುತ್ತೇನೆ. ಆದರೆ, ನಾನಾಗೆ ಲಾಬಿ ಮಾಡುವುದಿಲ್ಲ. ಪಕ್ಷಕ್ಕೆ ಯಾವುದೇ ತ್ಯಾಗ ಮಾಡಲು ನಾವು ಸಿದ್ಧರಿದ್ದೇವೆ. ಆದಷ್ಟು ಶೀಘ್ರ ದೇವೇಗೌಡರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು.

ಎಚ್​.ಡಿ.ಕುಮಾರಸ್ವಾಮಿ ಅವರು ಎರಡು ದೊಡ್ಡ ಸಂಸಾರ ನಡೆಸುತ್ತಿದ್ದಾರೆ. ಸರ್ಕಾರ ಹಾಗೂ ಪಕ್ಷವನ್ನೂ ನಡೆಸಿಕೊಂಡು ಹೋಗುತ್ತಿದ್ದಾರೆ. ಅವರಿಗೆ ಹೆಚ್ಚಿನ ಜವಾಬ್ದಾರಿ ಇದೆ. ಅವರಿಗೆ ನಾವು ತೊಂದರೆ ಕೊಡುವುದಿಲ್ಲ ಎಂದರು.

ಪಕ್ಷದ ಸಂಘಟನೆ ಹಿನ್ನೆಲೆಯಲ್ಲಿ ದೇವೇಗೌಡರು ಸಾಕಷ್ಟು ಸಲಹೆ ನೀಡಿದ್ದಾರೆ. ಲೋಕಸಭೆ ಉಪ ಚುನಾವಣೆಯಲ್ಲಿ ವರಿಷ್ಠರ ತೀರ್ಮಾನದಿಂದ ಸ್ಪರ್ಧೆ ಮಾಡಿದ್ದೆ. ಆದರೆ, ಚುನಾವಣೆ ಬಳಿಕ ಪಕ್ಷದ ಚಟುವಟಿಕೆಯಿಂದ ಸ್ವಲ್ಪ ದೂರ ಇದ್ದೆ. ನನಗೆ ಯಾವುದೇ ಅಸಮಾಧಾನವಿಲ್ಲ. ನನಗೆ ಯಾವುದೇ ಸಿಟ್ಟಿಲ್ಲ. ವಿಶ್ವನಾಥ್ ಅವರು ನನ್ನ ಜತೆ ಮಾತನಾಡಿದ್ದಾರೆ ಎಂದು ತಿಳಿಸಿದರು.

ರಾಷ್ಟ್ರಮಟ್ಟದಲ್ಲಿ ಮಹಾಘಟಬಂಧನ್ ಅಗತ್ಯ

ಉತ್ತರ ಪ್ರದೇಶದಲ್ಲಿ ಎಸ್‌.ಪಿ., ಬಿ.ಎಸ್‌.ಪಿ. ಹೊಂದಾಣಿಕೆಯಾಗುವಾಗ ಕಾಂಗ್ರೆಸ್‌ ಅನ್ನು ಹೊರಗಿಡಬಾರದಿತ್ತು. ಈ ಬಗ್ಗೆ ದೇವೇಗೌಡರು ಖಂಡಿತ ಮಾತನಾಡುತ್ತಾರೆ‌. ಪಕ್ಷದಲ್ಲಿ ಕೆಲವು ಸಣ್ಣಪುಟ್ಟ ಸಮಸ್ಯೆಗಳು ಇರಬಹುದು. ಅದೆಲ್ಲ ಪಕ್ಷದ ಒಳಗೆ ಬಗೆಹರಿಸಿಕೊಳ್ಳುತ್ತಾರೆ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *