More

    ಸೀಟು ಹಂಚಿಕೆ ಬಹುತೇಕ ಫೈನಲ್​: ಜೆಡಿಎಸ್​ಗೆ ಈ 3 ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ನಿರ್ಧಾರ

    ಬೆಂಗಳೂರು: ಲೋಕಸಮರಕ್ಕೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದೆ. ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ ಲೋಕಸಭೆ ಚುನಾವಣೆಗೆ ಮೈತ್ರಿಯನ್ನು ಘೋಷಿಸಿದ ಬಿಜೆಪಿ ಮತ್ತು ಜೆಡಿಎಸ್​, ಸೀಟು ಹಂಚಿಕೆಯ ತೀರ್ಮಾನವನ್ನು ಅಂತಿಮಗೊಳಿಸುವ ಹಂತದಲ್ಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್​ ಜತೆ ದೆಹಲಿಗೆ ಭೇಟಿ ನೀಡಿ, ಕೇಂದ್ರ ಗೃಹಸಚಿವ ಅಮಿತ್​ ಷಾ ಜತೆ ಸೀಟು ಹಂಚಿಕೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

    ಮೂಲಗಳ ಪ್ರಕಾರ ಜೆಡಿಎಸ್​ಗೆ 3 ಕ್ಷೇತ್ರಗಳನ್ನು ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್​ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ. ಹಾಸನ, ಮಂಡ್ಯ ಮತ್ತು ಕೋಲಾರ್ ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಡಲು ತೀರ್ಮಾನಿಲಾಗಿದೆ. ಆದರೆ, ಜೆಡಿಎಸ್ ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಕ್ಷೇತ್ರ ಸೇರಿದಂತೆ​ 5 ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿತ್ತು. ಸದ್ಯ 3 ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದು, ಉಳಿದಂತೆ ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ನಿರ್ಧರಿಸಲು ತೀರ್ಮಾನ ಮಾಡಲಾಗಿದೆ.

    ನಿನ್ನೆ (ಫೆ.21) ಅಮಿತ್ ಷಾ ಮತ್ತು ಎಚ್​.ಡಿ.ಕುಮಾರಸ್ವಾಮಿ ನಡುವೆ ಮಧ್ಯರಾತ್ರಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆಯಾಗಿದೆ ಎಂದು ತಿಳಿದುಬಂದಿದೆ.

    ಕರ್ನಾಟಕದ ಜನಸಂಖ್ಯೆಯ ಸುಮಾರು 16% ರಷ್ಟಿರುವ ಒಕ್ಕಲಿಗ ಮತವನ್ನು ಪರಿಗಣಿಸಿ ರಾಜ್ಯದ ರಾಜಕೀಯ ವಿಶ್ಲೇಷಕರು ಈ ಮೈತ್ರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಮೂಲಗಳ ಪ್ರಕಾರ ಜೆಡಿಎಸ್ ಕೋಟಾದಲ್ಲಿ ಇರುವ ಎಲ್ಲಾ 3 ಕ್ಷೇತ್ರಗಳು ಒಕ್ಕಲಿಗರ ಭದ್ರಕೋಟೆಗಳಾಗಿವೆ.

    ಒಕ್ಕಲಿಗರ ಮೇಲೆ ಜೆಡಿಎಸ್‌ಗೆ ಹಿಡಿತವಿದೆ. ಅಲ್ಲದೆ, ಪಕ್ಷದ ಮುಖ್ಯಸ್ಥ ಎಚ್‌.ಡಿ ಕುಮಾರಸ್ವಾಮಿ ಮತ್ತು ಅವರ ತಂದೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದರೆ, ಕಾಂಗ್ರೆಸ್‌ನಲ್ಲಿ ಡಿ.ಕೆ. ಶಿವಕುಮಾರ್ ಅವರು ಪ್ರಬಲ ಒಕ್ಕಲಿಗ ನಾಯಕ ಇದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಕ್ಕಲಿಗರು ತಮ್ಮ ಬೆಂಬಲವನ್ನು ವಿಭಜಿಸಿದ ಪರಿಣಾಮ ಜೆಡಿಎಸ್‌ ಮೇಲೆ ತೀವ್ರ ಪರಿಣಾಮ ಬೀರಿತು.

    ಈ ಲೋಕಾಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಒಕ್ಕಲಿಗರು ಯಾವ ರೀತಿಯಲ್ಲಿ ಮತ ಚಲಾಯಿಸುತ್ತಾರೆ ಎಂಬುದರ ಮೇಲೆ ಫಲಿತಾಂಶ ಅವಲಂಬಿತವಾಗಿರುತ್ತದೆ. 2019ರ ಲೋಕಸಭೆ ಚುನಾವಣೆಯಲ್ಲಿ, ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಿದಾಗ, ಎರಡೂ ಪಕ್ಷಗಳು ಭಾರಿ ನಿರಾಶೆಯನ್ನು ಎದುರಿಸಿದವು, ತಲಾ ಒಂದು ಸ್ಥಾನವನ್ನು ಮಾತ್ರ ಪಡೆದುಕೊಂಡವು. (ಏಜೆನ್ಸೀಸ್​)

    ಗೃಹಬಂಧನ ಭೀತಿಯಿಂದ ರಾತ್ರಿ ಕಾಂಗ್ರೆಸ್ ಕಚೇರಿಯಲ್ಲಿ ಮಲಗಿದ ಶರ್ಮಿಳಾ ರೆಡ್ಡಿ, ವಿಡಿಯೋ ವೈರಲ್

    ಭಾರತೀಯ ವಿದ್ಯಾರ್ಥಿನಿಯನ್ನು ಕೊಂದ ಪೊಲೀಸ್​ ಅಧಿಕಾರಿ ವಿರುದ್ಧ ಕೇಸು ದಾಖಲಿಸದ US ಕೋರ್ಟ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts