More

    ಲೋಕಸಭಾ ಚುನಾವಣೆ ಬಳಿಕ ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ

    ಚನ್ನರಾಯಪಟ್ಟಣ: ರಾಜ್ಯದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿಗೆ ಮುಂದಾಗಿದ್ದು, ಲೋಕಸಭೆ ಚುನಾವಣೆ ನಂತರ ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೇಳಿದರು.

    1996 ರಲ್ಲಿ ಸ್ವಂತ ಬಲದ ಮೇಲೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರ ನಡೆಸಿದ್ದು ಬಿಟ್ಟರೆ ಆಲ್ಲಿಂದ ಇಲ್ಲಿಯವರೆಗೂ ಸ್ವಂತ ಬಲದ ಮೇಲೆ ಅಧಿಕಾರ ನಡೆಸಿಲ್ಲ. ಅಂದಿನಿಂದ ಪ್ರತಿ ಚುನಾವಣೆಯಲ್ಲೂ ಸ್ಥಾನ ಕಡಿಮೆಯಾಗುತ್ತಿದ್ದು, ಈಗ 20 ಸೀಟ್‌ಗೆ ಬಂದು ನಿಂತಿದೆ. ಹೀಗೆ ಸಾಗಿದಲ್ಲಿ ಪಕ್ಷವೇ ರಾಜ್ಯದಲ್ಲಿ ಉಳಿಯುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಒಂದೂ ಸ್ಥಾನವನ್ನು ಗೆಲ್ಲಲಾಗದು ಎಂದು ಭಾವಿಸಿ ಬಿಜೆಪಿಯೊಂದಿಗೆ ಮೈತ್ರಿಗೆ ಮುಂದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಹಾಸನ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಕುರಿತಾಗಿ ಈಗಾಗಲೇ ಎರಡು, ಮೂರು ಬಾರಿ ಚರ್ಚೆ ಆಗಿದೆ. ಅಭ್ಯರ್ಥಿಯನ್ನು ಆಯ್ಕೆ ಮಾಡಲು ಜ.10ರಂದು ಬೆಂಗಳೂರಿನಲ್ಲಿ ಕೆಪಿಸಿಸಿಯಿಂದ ಜಿಲ್ಲಾ ಮುಖಂಡರ ಸಭೆ ಕರೆಯಲಾಗಿದೆ. ನಾನು ಸೇರಿ ಮಾಜಿ ಸಚಿವ ಬಿ.ಶಿವರಾಂ, ಬಾಗೂರು ಮಂಜೇಗೌಡ, ಶ್ರೇಯಸ್ಸ್, ಎಚ್.ಕೆ.ಜವರೇಗೌಡರು, ಜೆ.ಎಂ.ರಾಮಚಂದ್ರ ಆಕಾಂಕ್ಷಿಗಳಾಗಿದ್ದು, ಎರಡು ದಿನಗಳ ಹಿಂದೆ ಎಚ್.ಎಸ್.ವಿಜಯ್‌ಕುಮಾರ್ ಕೂಡ ಆಕಾಂಕ್ಷಿ ಎಂದಿದ್ದಾರೆ. ಈ ಸಂಬಂಧ ಪಕ್ಷದ ವೇದಿಕೆ, ಯಾವೊಬ್ಬ ಮುಖಂಡರ ಬಳಿಯೂ ಪ್ರಸ್ತಾಪ ಮಾಡಿಲ್ಲ. ಅವರ ತೀರ್ಮಾನ ರೈಲು ಹೋದ್ಮೇಲೆ ಟಿಕೆಟ್ ಪಡೆದಂತಾಗಿದೆ ಎಂದರು.

    ಕೊಬ್ಬರಿ ಬೆಲೆ ಕುಸಿತ ಮತ್ತು ಬರಗಾಲದಿಂದ ಕಂಗಲಾಗಿರುವ ರೈತರ ನೆರವಿಗೆ ಧಾವಿಸುವಂತೆ ನಾನು, ಶಿವಲಿಂಗೇಗೌಡರು ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡ ಕೇಂದ್ರ ಕೃಷಿ ಸಚಿವ, ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ನಮ್ಮ ಮನವಿಗೆ ಪೂರಕವಾಗಿ ಸ್ಪಂದಿಸಿದ್ದು, ಜನವರಿ ಮೊದಲ ವಾರದಲ್ಲಿ ನಫೆಡ್ ಕೇಂದ್ರ ತೆರೆಯುವ ಭರವಸೆ ನೀಡಿದ್ದಾರೆ ಎಂದರು.

    ಜ.6ರಂದು ಜಿಲ್ಲಾ ಮಂತ್ರಿ ಕೆ.ಎನ್.ರಾಜಣ್ಣ ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಜನತಾ ದರ್ಶನ ನಡೆಸಲಿದ್ದು, ತಾಲೂಕಿನ ಜನರು, ರೈತರು ತೊಂದರೆಗಳಿದ್ದರೆ ಅರ್ಜಿ ಸಲ್ಲಿಸಬಹುದು. ಎಲ್ಲ 30 ಇಲಾಖೆಗಳ ಅಧಿಕಾರಿಗಳು ಭಾಗವಹಿಸುವ ಸಭೆಯಲ್ಲಿ ಸ್ಥಳೀಯ ಮಟ್ಟದಲ್ಲೇ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಆಗದಿದ್ದಲ್ಲಿ ಜಿಲ್ಲಾಧಿಕಾರಿ ಸಮಯ ನೀಡಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದರು.
    ಪುರಸಭಾ ಸದಸ್ಯ ಪ್ರಕಾಶ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts