ಜೆಡಿಎಸ್​ ಪಂಚರತ್ನ ಯಾತ್ರೆ ನ.18ಕ್ಕೆ ಫಿಕ್ಸ್​: ಮುಳಬಾಗಿಲುನಲ್ಲಿ ಬೃಹತ್​ ಸಾರ್ವಜನಿಕ ಸಮಾರಂಭದೊಂದಿಗೆ ಆರಂಭ

JDS
Published on

ಮುಳಬಾಗಿಲು: ಮಳೆಯ ಕಾರಣದಿಂದ ಎರಡು ಬಾರಿ ಮುಂದೂಡಿಕೆಯಾಗಿದ್ದ ಜೆಡಿಎಸ್​ನ ಪಂಚರತ್ನ ರಥಯಾತ್ರೆಯು ನ.18ರಂದು(ಶುಕ್ರವಾರ) ಮಧ್ಯಾಹ್ನ 12ಕ್ಕೆ ಬಾಲಾಜಿ ಭವನದ ಪಕ್ಕದ ಮೈದಾನದಲ್ಲಿ ಬೃಹತ್​ ಸಾರ್ವಜನಿಕ ಸಮಾರಂಭದೊಂದಿಗೆ ಆರಂಭಗೊಳ್ಳಲಿದೆ.

ಕೋಲಾರ-ಚಿಕ್ಕಬಳ್ಳಾಪುರ, ತುಮಕೂರು-ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಜೆಡಿಎಸ್​ ಮುಖಂಡರು, ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಸಭೆಯನ್ನು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ, ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಎಚ್​.ಡಿ.ರೇವಣ್ಣ, ಜೆಡಿಎಸ್​ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಸೇರಿ ರಾಜ್ಯ- ಜಿಲ್ಲಾಮಟ್ಟದ ಜೆಡಿಎಸ್​ ಮುಖಂಡರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net