More

    ಕಾವೇರಿ ಹೆಸರಿನಲ್ಲಿ ಜೆಡಿಎಸ್ ರಾಜಕಾರಣ

    ಮದ್ದೂರು: ಕಾವೇರಿ ನೀರಿನ ಹೆಸರಿನಲ್ಲಿ ಜಿಲ್ಲೆಯ ಜೆಡಿಎಸ್ ನಾಯಕರು ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಸುರೇಶ್‌ಕಂಠಿ ಆರೋಪಿಸಿದರು.

    ಈ ಬಾರಿ ಪ್ರಕೃತಿಯೇ ಮುನಿದಿರುವುದರಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಹೀಗಿರುವಾಗ ಜೆಡಿಎಸ್ ನೀರಿನ ಹೆಸರಲ್ಲಿ ರಾಜಕೀಯ ಮಾಡುವುದು ಎಷ್ಟು ಸರಿ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸುವ ಮೂಲಕ ರೈತರ ಬೆಳೆಗಳಿಗೆ ನೀರು ಹರಿಸಬೇಕೆಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಇತ್ತೀಚೆಗೆ ಆಗ್ರಹಿಸಿದ್ದರು. ಆದರೆ ಕೆಆರ್‌ಎಸ್‌ನಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಕುಡಿಯುವ ನೀರಿಗೂ ಕೊರತೆ ಉಂಟಾಗುವ ಸಾಧ್ಯತೆಗಳು ಇದೆ. ಹೀಗಿರುವಾಗ ನಾಲೆಗಳಿಗೆ ನೀರು ಹರಿಸಬೇಕೆಂದು ಒತ್ತಾಯಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

    ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಜಿಲ್ಲೆಯ ಅಭಿವೃದ್ಧಿಗೆ ನಿರಂತರವಾಗಿ ದುಡಿಯುತ್ತಿದ್ದಾರೆ. ಅವರ ಜನಪ್ರಿಯತೆ ಹಾಗೂ ಸಮಗ್ರ ಅಭಿವೃದ್ಧಿ ಸಹಿಸಲಾಗದೆ ಏಕವಚನದಲ್ಲಿ ಮಾತನಾಡುವುದು ಎಷ್ಟು ಸರಿ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗಿಮಿಕ್ ಮಾಡಲಾಗುತ್ತಿದೆ. ಜಿಲ್ಲೆಯ ಜನರಿಗೆ ಯಾರು ಅಭಿವೃದ್ಧಿ ಮಾಡುತ್ತಿದ್ದಾರೆ ಎಂಬ ಬಗ್ಗೆ ತಿಳಿದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಜಿಲ್ಲೆಯ ಜನರು ತಕ್ಕ ಪಾಠ ಕಲಿಸಲಿದ್ದಾರೆಂದು ಎಚ್ಚರಿಕೆ ನೀಡಿದರು.

    ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಮ್ಮಯ್ಯ, ಗ್ರಾಪಂ ಮಾಜಿ ಸದಸ್ಯ ನಿರಂಜನ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts