ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶದ ಮೇಲೆ ಭಾರೀ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಪಕ್ಷಕ್ಕೆ ಈ ಬಾರಿಯು ಭಾರೀ ನಿರಾಶೆಯಾಗಿದೆ. 2004ರ ಬಳಿಕ ಜೆಡಿಎಸ್ ಪಕ್ಷ ವರ್ಚಸ್ಸು ಕಳೆದುಕೊಂಡಿದ್ದು, ಮೇಲಕ್ಕೇರಲು ಹರಸಾಹಸ ಪಡುತ್ತಿದೆ.
ಈ ಬಾರಿಯೂ ಜೆಡಿಎಸ್ಗೆ ಭಾರೀ ಹಿನ್ನಡೆಯಾಗಿದೆ. 2004ರಿಂದ ಇಲ್ಲಿಯವರೆಗೂ ಗಮನಿಸಿದರೆ ಈ ಬಾರಿ ತೀವ್ರ ಹಿನ್ನಡೆಯಾಗಿದೆ. ಸಿದ್ದರಾಮಯ್ಯ, ದೇವೇಗೌಡರ ಜಂಟಿ ನಾಯಕತ್ವದಲ್ಲಿ ಜೆಡಿಎಸ್ 58 ಸ್ಥಾನ ಗೆದ್ದಿತ್ತು. 2008ರಲ್ಲಿ ಜೆಡಿಎಸ್ 28 ಸ್ಥಾನ ಮಾತ್ರ ಗೆದ್ದಿತ್ತು. 2013 ರಲ್ಲಿ 40 ಸ್ಥಾನ ಗೆದ್ದಿದ್ದ ಜೆಡಿಎಸ್, 2018ರಲ್ಲಿ 37 ಕ್ಷೇತ್ರಗಳಲ್ಲಿ ಗೆದ್ದಿತ್ತು.
2023 ರಲ್ಲಿ ಕೇವಲ 20 ಸ್ಥಾನಕ್ಕೆ ಜೆಡಿಎಸ್ ಸೀಮಿತವಾಗಿದೆ. ಈ ಬಾರಿ ಜೆಡಿಎಸ್ ಕಳಪೆ ಪ್ರದರ್ಶನ ಮಾಡಿದೆ. ಕಳೆದ 20 ವರ್ಷದಲ್ಲಿ ಇಷ್ಟೊಂದು ಹೀನಾಯ ಪ್ರದರ್ಶನ ಮಾಡಿರಲಿಲ್ಲ. ಕುಮಾರಸ್ವಾಮಿ ನಡೆಗೆ ಬೇಸರ ವ್ಯಕ್ತಪಡಿಸಿ ಅನೇಕ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಈ ಬಾರಿ ಅಧಿಕಾರಕ್ಕೆ ಬರಬೇಕೆಂದು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ, ರಾಜ್ಯದ ಜನತೆ ಜೆಡಿಎಸ್ ಅನ್ನು ಕೈ ಹಿಡಿಯಲಿಲ್ಲ.
ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್ ಪ್ರಕಾರ ಕಾಂಗ್ರೆಸ್ 135 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ 66 ಮತ್ತು ಜೆಡಿಎಸ್ 19 ಹಾಗೂ ಇತರೆ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಸ್ಪಷ್ಟಬಹುಮತ ಸಾಧಿಸಿದ್ದು, ಸರ್ಕಾರ ರಚನೆ ಮಾಡುವುದು ಬಹುತೇಕ ಫಿಕ್ಸ್ ಆಗಿದೆ.
2018ರ ಫಲಿತಾಂಶ ಏನಿತ್ತು?
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತ್ತು.
ಸಿದ್ದು ಸಿಎಂ, ಡಿಕೆಶಿ ಡಿಸಿಎಂ! ಸರ್ಕಾರ ರಚನೆಗೆ ಕಾಂಗ್ರೆಸ್ ಸೂತ್ರ ರೆಡಿ? ನಾಳೆ ದೆಹಲಿಯಲ್ಲಿ ಮಹತ್ವದ ಸಭೆ
ಕಚೇರಿ ಪ್ರವೇಶಿಸುತ್ತಿದ್ದಂತೆ ಸಿಎಂಗೆ ಬುಸುಗುಟ್ಟಿದ ನಾಗಪ್ಪ, ಕೆಲಕಾಲ ಆತಂಕದ ವಾತಾವರಣ