More

    ಜನರ ದನಿಯಾಗಲು ಜೆಡಿಎಸ್ ಕಸರತ್ತು: ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಿದ್ಧತೆ

    ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕಾಯ್ದೆಗಳು, ಕರೊನಾ, ಪ್ರವಾಹಗಳಂತ ಜನರ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಅವಗಣನೆ ಮತ್ತಿತರ ತುರ್ತು ಸಮಸ್ಯೆಗಳ ಬಗೆಗಿನ ಸರ್ಕಾರದ ನಿರ್ಲಕ್ಷ್ಯವನ್ನು ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ಎತ್ತಿ ಹಿಡಿದು ಸರ್ಕಾರಕ್ಕೆ ನಡುಕ ಹುಟ್ಟಿಸಲು ಜೆಡಿಎಸ್ ಸನ್ನದ್ಧವಾಗಿದೆ. ಡ್ರಗ್ಸ್ ಮಾಫಿಯಾಕ್ಕಿಂತ ಮುಖ್ಯವಾಗಿ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ವಿುಕ ಕಾಯ್ದೆ ತಿದ್ದುಪಡಿ ಸೇರಿದಂತೆ ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿರುವ ಕಾಯ್ದೆಗಳಿಂದ ಎದುರಾಗಬಹುದಾದ ಆಪತ್ತುಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಜೆಡಿಎಸ್ ನಾಯಕರು ತುದಿಗಾಲ ಮೇಲೆ ನಿಂತಿದ್ದಾರೆ.

    ಶಾಸಕರಿಂದ ಸಂಗ್ರಹಿಸಿದ ಮಾಹಿತಿ ಬಳಕೆ: ಕರೊನಾ, ಪ್ರವಾಹ ಪರಿಸ್ಥಿತಿಯ ಬಗ್ಗೆ ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರು ನಾಲ್ಕೈದು ಹಂತಗಳಲ್ಲಿ ವೀಡಿಯೋ ಕಾನ್ಪರೆನ್ಸ್ ಮೂಲಕ ಪಕ್ಷದ ಶಾಸಕರು, ಮುಖಂಡರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಈ ಮಾಹಿತಿಯನ್ನು ಮುಂದಿಟ್ಟು ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಸದನದ ಒಳಗೆ ಮತ್ತು ಹೊರಗೆ ಹೋರಾಟ ರೂಪಿಸಲು ಚಿಂತನೆ ನಡೆಸಿದ್ದಾರೆ.

    ಮುಂಗಾರು ಅಧಿವೇಶನಕ್ಕೆ ಸಕಲ ಸಿದ್ಧತೆ

    ಬೆಂಗಳೂರು: ಸೆ.21ರಿಂದ ಆರಂಭವಾಗುವ ಅಧಿವೇಶನಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಹೇಳಿದ್ದಾರೆ. ಒಂಭತ್ತು ವಿಧೇಯಕ ಗಳನ್ನು ಅಧಿವೇಶನದಲ್ಲಿ ಒಪ್ಪಿಗೆಗಾಗಿ ಮಂಡನೆ ಮಾಡಲಾಗುವುದು. ಇಲ್ಲಿವರೆಗೂ 1254 ಪ್ರಶ್ನೆ ಗಳನ್ನು ಸ್ವೀಕರಿಸಲಾಗಿದೆ. ಅದರಲ್ಲಿ ನಿಯಮ 72 ಅಡಿಯಲ್ಲಿ 34 ಸೂಚನೆಗಳನ್ನು, ನಿಯಮ 330 ಅಡಿಯಲ್ಲಿ 24 ಸೂಚನೆಗಳನ್ನು ಸ್ವೀಕರಿಸಲಾಗಿದೆ ಎಂದು ಮಾಹಿತಿ ನೀಡಿದರು. ಕಲಾಪ ಆರಂಭಕ್ಕೂ ಮುನ್ನ ಹಾಗೂ ಮುಗಿದ ತಕ್ಷಣ ಎರಡೆರಡು ಬಾರಿ ಸ್ಯಾನಿಟೈಸ್ ಮಾಡಿಸಲಾಗು ವುದು. ಸಾಮಾಜಿಕ ಅಂತರ ಕಾಯ್ದುಕೊಂಡು ಕಲಾಪ ನಡೆಸಲಾಗುವುದು ಎಂದರು.

    ಕೋವಿಡ್ ಪರೀಕ್ಷೆಗೆ ಚಾಲನೆ

    ಅಧಿವೇಶನದಲ್ಲಿ ಪಾಲ್ಗೊಳ್ಳುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಶುಕ್ರವಾರ ಬ್ಯಾಂಕ್ವೆಟ್ ಹಾಲ್​ನಲ್ಲಿ ಸ್ಪೀಕರ್ ಖುದ್ದು ಪರೀಕ್ಷೆಗೊಳಗಾಗುವ ಮೂಲಕ ಅಧಿವೇಶನದಲ್ಲಿ ಭಾಗವಹಿಸುವ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕರೆ ನೀಡಿದರು. ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು, ಪೊಲೀಸರು, ಮಾರ್ಷಲ್ಸ್​ಗಳು, ಡಿ ಗ್ರೂಪ್ ನೌಕರರು, ಸಹಾಯಕರು ಸೇರಿ ಎಲ್ಲರ ಪರೀಕ್ಷೆಯೂ ಆಗಬೇಕಾಗಿದೆ. ಶುಕ್ರವಾರ 300ಕ್ಕೂ ಹೆಚ್ಚು ಜನರು ಪರೀಕ್ಷೆ ಮಾಡಿಸಿಕೊಂಡಿದ್ದು, ಶನಿವಾರ ಮತ್ತು ಭಾನುವಾರವೂ ಪರೀಕ್ಷೆ ಮುಂದುವರಿಯಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts